ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸುಳ್ಳು ಹೇಳುವ ಶಾಮನೂರು ಶಿವಶಂಕರಪ್ಪ: ಸಂಸದ ಸಿದ್ದೇಶ್ವರ ಕಿಡಿ

On: April 18, 2023 12:53 PM
Follow Us:
Davanagere Mp Siddeshwar
---Advertisement---

SUDDIKSHANA KANNADA NEWS/ DAVANAGERE/ DATE:18-04-2023

ದಾವಣಗೆರೆ (DAVANAGERE): ಲೋಕಾಯುಕ್ತ ದಾಳಿ ವೇಳೆ ಲಂಚ ಪ್ರಕರಣದಲ್ಲಿ ಚನ್ನಗಿರಿ ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಜೈಲಿಗೆ ಹೋಗಲು ನಾನು ಕಾರಣ ಎಂಬ ಸುಳ್ಳು ಆರೋಪವನ್ನು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಮಾಡಿದ್ದರು. ಈಗ ಮತ್ತೆ ಸುಳ್ಳು ಹೇಳುತ್ತಿದ್ದಾರೆ. ಲಿಂಗಾಯತರಿಗೆ ಬಿಜೆಪಿಯಲ್ಲಿ ಯಾವುದೇ ಮೋಸ ಮಾಡಿಲ್ಲ. ಕಾಂಗ್ರೆಸ್ ಸುಳ್ಳು ಹೇಳುವ ಪಕ್ಷ ಎಂದು ಸಂಸದ ಜಿ. ಎಂ. ಸಿದ್ದೇಶ್ವರ ಕಿಡಿಕಾರಿದರು.

ತಹಶೀಲ್ದಾರ್ ಕಚೇರಿ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಲಕ್ಷ್ಮಣ ಸವದಿ ಬಿಜೆಪಿ (BJP)ಬಿಟ್ಟಿದ್ದಾರೆ. ಪಕ್ಷದಲ್ಲಿ ಇನ್ನು ಲಿಂಗಾಯತ ಸಮುದಾಯದ ನಾಯಕರಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಏನಿದ್ದರೂ ಪಕ್ಷದ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ. ನನ್ನದೇನಿದ್ದರೂ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿ ಅಷ್ಟೇ ಎಂದು ಹೇಳಿದರು.

ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 8 ಕ್ಷೇತ್ರಗಳು ಬರುತ್ತವೆ. ಹರಪನಹಳ್ಳಿ ವಿಧಾನಸಭಾ ಕ್ಷೇತ್ರವೂ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ಎಂಟು ಕಡೆಗಳಲ್ಲಿಯೂ ಕಮಲ ಅರಳುವ ಭರವಸೆ ಇದೆ. ಎಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಯಕೊಂಡ ಬಿಜೆಪಿ ಬಂಡಾಯ ಶಮನವಾಗುತ್ತೆ. ಈಗಾಗಲೇ ಬಂಡಾಯಗಾರರ ಜೊತೆ ನಾನು ಮಾತನಾಡಿದ್ದೇನೆ. ನಾಳೆ ಕೇಂದ್ರ ಆರೋಗ್ಯ ಸಚಿವರು ಆಗಮಿಸುತ್ತಿದ್ದು, ಎಲ್ಲರ ಜೊತೆ ಮತ್ತೊಮ್ಮೆ ಮಾತುಕತೆ ನಡೆಸಲಾಗುವುದು. ಎಲ್ಲರೂ ಬಿಜೆಪಿ ಕಾರ್ಯಕರ್ತರೇ. ಹಾಗಾಗಿ ಬಂಡಾಯ ಶಮನ ಆಗುತ್ತದೆ. ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿ (NARENDRA MODI), ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಉತ್ತಮ ಆಡಳಿತ ನೀಡಿದ್ದಾರೆ. ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಬಸವರಾಜ್ ನಾಯ್ಕ್ ಸಹ ಈ ಹಿಂದೆ ಶಾಸಕರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಬಂಜಾರ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ತಾಲೂಕಿನಲ್ಲಿ ಮೂರ್ನಾಲ್ಕು ಬಾರಿ ಓಡಾಡಿದ್ದಾರೆ. ಹಾಗಾಗಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಯಕೊಂಡದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು.

ನಾಮಪತ್ರ ಸಲ್ಲಿಸುವುದಾಗಿ ಬಂಡಾಯಗಾರರು ನಿಮಗೆ ಹೇಳಿರಬಹುದು. ನಮಗೇನೂ ತಿಳಿಸಿಲ್ಲ. ನಮ್ಮ ಕಾರ್ಯಕರ್ತರು ಅವ್ರು. ಎಲ್ಲರೂ ಒಟ್ಟಾಗಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ಇದೆ. 11 ಆಕಾಂಕ್ಷಿಗಳಿದ್ದರೆ ಎಲ್ಲರಿಗೂ ಟಿಕೆಟ್ ನೀಡಲು ಆಗದು. ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು. ಬಿಜೆಪಿ (BJP) ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಕರೆ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment