SUDDIKSHANA KANNADA NEWS/ DAVANAGERE/ DATE:08-02-2025
ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಲನುಭವಿಸಿದ್ದಾರೆ.
ನವದೆಹಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಅವರ ವಿರುದ್ಧ ಅರವಿಂದ್ ಕೇಜ್ರಿವಾಲ್ ಹೀನಾಯ ಸೋಲು ಅನುಭವಿಸಿದ್ದಾರೆ.
ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದು, ಈ ಮೂಲಕ ಆಮ್ ಆದ್ಮಿ ಪಕ್ಷದ ದೊಡ್ಡ ನಾಯಕನಿಗೆ ಮತದಾರನಿಗೆ ಸೋಲಿನ ರುಚಿ ತೋರಿಸಿದ್ದಾರೆ.
ನವದೆಹಲಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡರು. ಆ ನಂತರ ಅರವಿಂದ್ ಕೇಜ್ರಿವಾಲ್ ಮುನ್ನಡೆ ಸಾಧಿಸಿದರು. ಮತ್ತೆ ಮುನ್ನಡೆ ಕಾಯ್ದುಕೊಂಡ ಪರ್ವೇಶ್ ವರ್ಮಾ ಮುನ್ನಡೆ ಸಾಧಿಸುತ್ತಲೇ ಇದ್ದರು. ಅಂತಿಮವಾಗಿ ಕೇಜ್ರಿವಾಲ್ ಸೋಲಿಸುವ ಮೂಲಕ ಸಿಡಿಲಾಘಾತ ನೀಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಗೆ ಸೋಲಿನ ರುಚಿ ಉಣಿಸಿದ ಪರ್ವೇಶ್ ವರ್ಮಾ ಸಿಎಂ ಆಗುತ್ತಾರಾ ಎಂಬ ಪ್ರಶ್ನೆಯೂ ಉದ್ಭವಿಸಿದೆ.