ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹುಟ್ಟುಹಬ್ಬವನ್ನು ಫೆಬ್ರವರಿ 27ರಂದು ದಾವಣಗೆರೆಯಲ್ಲಿ ಆತ್ಯಂತ ವಿಜೃಂಭಣೆಯಿಂದ ಆಚರಿಸಲು ಯಡಿಯೂರಪ್ಪ ಅಭಿಮಾನಿಗಳ ಬಳಗ ನಿರ್ಧರಿಸಿದೆ.
ರವಿವಾರ ನಗರದ ಸಾಯಿ ಇಂಟರ್ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ, ದಾವಣಗೆರೆಯಲ್ಲಿ ಈ ಬಾರಿ ಅವರ ಹುಟ್ಟುಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೋಮ್ಮೆ ಅಧಿಕಾರಕ್ಕೆ ತರಲು ಕಾರ್ಯಪ್ರವೃತ್ತರಾಗಲು, ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಇನ್ನಷ್ಟು ಸಬಲಗೊಳಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಎಂ.ಪಿ ರೇಣುಕಚಾರ್ಯ ತಿಳಿಸಿದರು.
ಜನ್ಮದಿನೋತ್ಸವಕ್ಕೆ ಸಮಿತಿ ರಚನೆ
ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಪಿ ರೇಣುಕಚಾರ್ಯ ಫೆ.27ಕ್ಕೆ ದಾವಣಗೆರೆಯಲ್ಲಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನವನ್ನ ಆಚರಿಸುವ ನಿಟ್ಟಿನಲ್ಲಿ ಸಭೆಯಲ್ಲಿದ್ದ 10ಜನರ ಸಮಿತಿಯೊಂದು ರಚನೆಗೊಂಡಿದೆ, ಈ ಸಮಿತಿಯೂ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಮುಂದಿನ ಚುನಾವಣೆಯಲ್ಲಿ 140 ಸ್ಥಾನಗಳನ್ನು ಗೆಲ್ತೆವೆ ಎಂದು ಹೇಳಿದರು.
ಸಭೆಗೂ ಮುನ್ನ ಮಾಜಿ ಶಾಸಕರು, ಮಾಜಿ ಸಚಿವರು ಬೆಳಗ್ಗೆ ನಗರ ದೇವತೆ ಶ್ರೀ ದುರ್ಗಾಂಭೀಕ ದೇವಸ್ಥಾನಕ್ಕೆ ಭೇಟಿಕೊಟ್ಟು ವಿಜಯೇಂದ್ರ ರವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು, ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಎಸ್.ಎ. ರವೀಂದ್ರನಾಥ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಹರತಾಳು ಹಾಲಪ್ಪ ಇತರ ಮುಖಂಡರ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು.