ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಹೊಸ ವರ್ಷಾಚರಣೆಗೆ ಪೋಲಿಸರಿಂದ ಭರ್ಜರಿ ಬೇಟೆ

On: January 1, 2025 11:33 AM
Follow Us:
---Advertisement---

ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ನಗರದ 7 ಠಾಣೆಗಳ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ 11 ಮಂದಿಯನ್ನು ಬಂಧಿಸಿ, 13 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಗಾಂಜಾ ಜಪ್ತಿ ಮಾಡಿದ್ದಾರೆ.

ಈ ಕುರಿತು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರು, ಬಂಧಿತ ಆರೋಪಿಗಳು ಕೇರಳ, ಅಸ್ಸಾಂ, ಒಡಿಶಾ, ತ್ರಿಪುರ, ಜಾರ್ಖಂಡ್‌, ಮಣಿಪುರ ಸೇರಿ ನೆರೆ ರಾಜ್ಯಗಳಿಂದ ನಗರಕ್ಕೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಆರೋಪಿಗಳ ಪೈಕಿ ಸ್ವಿಗ್ಗಿ ಡೆಲಿವರಿ ಬಾಯ್‌, ಆಟೋ ಚಾಲಕರು ಇದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ವಿರುದ್ಧ ಆಯಾ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಡ್ರಗ್ಸ್‌ ಮಾರಲೆಂದೇ ಡೆಲಿವರಿ ಬಾಯ್‌ ಆಗಿದ್ದ ಯುವಕ ಅಸ್ಸಾಂನಿಂದ ಗಾಂಜಾ ತಂದು ನಗರದಲ್ಲಿ ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ ಫುಡ್‌ ಡೆಲವರಿ ಬಾಯ್‌ನನ್ನು ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಬಂಧಿಸಿದ್ದಾರೆ.

ಅಸ್ಸಾಂ ಮೂಲದ ರಾಜನ್‌ ಛತ್ರಿ(32) ಬಂಧಿತ. ಈತ ಕೆಲ ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಸೆಕ್ಯುರಿಟಿ ಕೆಲಸ ಮಾಡಿಕೊಂಡಿದ್ದು, ಇತ್ತೀಚೆಗಷ್ಟೇ ಕೆಲಸ ಬಿಟ್ಟು ಮಾದಕ ವಸ್ತು ಮಾರಾಟ ಮಾಡಲೆಂದು ಸ್ವಿಗ್ಗಿ ಡೆಲವರಿ ಬಾಯ್‌ ಆಗಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಚಿಕ್ಕತೋಗೂರು ಗ್ರಾಮದ ನೈಸ್‌ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಬಂದಿದ್ದಾಗ ಮಾಲು ಸಮೇತ ಸಿಕ್ಕಿಬಿದ್ದಿದ್ದಾನೆ ಎಂದರು.

ಹೊಸ ವರ್ಷಾಚರಣೆ ವೇಳೆ ಹಾಸ್ಟೆಲ್ ಬಳಿ ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಆಟೋ ಚಾಲಕನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಂದಿನಿ ಲೇಔಟ್‌ ನಿವಾಸಿ ಸದ್ದಾಂ (34) ಬಂಧಿತ. ಆರೋಪಿಯಿಂದ 75 ಸಾವಿರ ರೂಪಾಯಿ ಮೌಲ್ಯದ 1 ಕೆ.ಜಿ. 450 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿ ಆಟೋ ಚಾಲಕನಾಗಿದ್ದು, ಜತೆಗೆ ಹೆಚ್ಚಿನ ಹಣ ಸಂಪಾದಿಸಲು ಠಾಣೆ ವ್ಯಾಪ್ತಿಯ ಒಕ್ಕಲಿಗರ ಸಂಘದ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುವಾಗ ಸಿಕ್ಕಿ ಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದರು. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

Join WhatsApp

Join Now

Join Telegram

Join Now

Leave a Comment