SUDDIKSHANA KANNADA NEWS/ DAVANAGERE/ DATE:13-02-2024
ದಾವಣಗೆರೆ: ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗಾಕಾಂಕ್ಷಿಗಳಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗಾವಕಾಶವನ್ನು ಒದಗಿಸುವ ಸಂಬಂಧ ಈ ಮೇಳವನ್ನು ಆಯೋಜಿಸಲಾಗಿದೆ. ನೋಂದಾವಣೆಯಾಗಲು ವೆಬ್ಸೈಟ್ ಅಥವಾ ಕ್ಯೂ ಆರ್ ಕೋಡ್ ಮೂಲಕ ನೊಂದಾಯಿಸಲು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ತಿಳಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ:
ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಚನ್ನಗಿರಿ ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಫೆ.14 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿದಲ್ಲಿ ಅಂತಹ ದೂರುಗಳನ್ನು ಸಲ್ಲಿಸಬಹುದೆಂದು ತಿಳಿಸಿದ್ದಾರೆ.