ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

SPECIAL STROY: 52 ಗೋಲ್ಡ್ ಮೆಡಲ್ ಗೆದ್ದಾಕೆ ಅಂತಾರಾಷ್ಟ್ರೀಯ ಯೋಗ ಚಾಂಪಿಯನ್…! ಚಿನ್ನದ ರಾಣಿ “ಸೃಷ್ಟಿ”ಸಿದ ಸಾಧನೆಯ ಯಶೋಗಾಥೆ ಸ್ಚೋರಿ ಇದು

On: March 11, 2024 3:31 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:10-03-2024

ದಾವಣಗೆರೆ: ಯೋಗಾಸನ ಎಂಬುದು ಎಲ್ಲರಿಗೂ ಒಲಿಯುವಂಥದ್ದಲ್ಲ. ಸಾಕಷ್ಟು ಏಕಾಗ್ರತೆ, ಪರಿಶ್ರಮ, ಕಠಿಣ ಅಭ್ಯಾಸ ಬೇಕೇ ಬೇಕು. ಇದಕ್ಕಾಗಿ ತಪಸ್ಸು ಮಾಡಬೇಕು. ಅದರಲ್ಲಿಯೂ ಬಳ್ಳಿಯಂತೆ ದೇಹ ಬಳುಕಿಸುವ ಈಕೆ ಸಾಧನೆ ಮೆಚ್ಚುವಂಥದ್ದು. ಜಿಲ್ಲೆ, ರಾಜ್ಯ ಮಟ್ಟದಲ್ಲಿ ಸಾಧನೆ ಮಾಡುವುದೇ ಸುಲಭವಲ್ಲ. ಅಂಥಹುದರಲ್ಲಿ ಈಕೆ ರಾಷ್ಟ್ರಮಟ್ಟದಲ್ಲಿಯೂ ತನ್ನದೇ ಆದ ಛಾಪು ಮೂಡಿಸಿದ್ದಾಳೆ. ಜೊತೆಗೆ ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ ಸಹ ಹೌದು.

ಯೋಗದಲ್ಲಿ ಇಂಥ ಸಾಧನೆ ಮಾಡಿರುವ ಈಕೆಯ ಹೆಸರು ಕೆ. ವೈ. ಸೃಷ್ಟಿ. ಹರಿಹರದ ಯೋಗರಾಜ್ ಮತ್ತು ಶಾಂಬವಿ ದಂಪತಿ ಪುತ್ರಿ. ಹರಿಹರದಲ್ಲಿನ ಶ್ರೀ ನೀಲಕಂಠೇಶ್ವರ ಪಬ್ಲಿಕ್ ಸ್ಕೂಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಈಕೆಗೆ ಇನ್ನು 13 ವರ್ಷ. ಮಾಡಿರುವ ಸಾಧನೆ ಮಾತ್ರ ಅಪಾರ.

ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಆಗಿರುವ ಕೀರ್ತಿ ಈಕೆಯದ್ದು. ಮನಸ್ಸು ಮಾಡಿದರೆ ಸಾಧ್ಯ ಎಂಬಂತೆ ಈಕೆಯು ತಾಯಿ ಹಾಕಿಕೊಟ್ಟ ಮಾರ್ಗದಲ್ಲಿ ನಡೆದಿದ್ದಾಳೆ. ಸೃಷ್ಟಿ ತಾಯಿ ಸಹ ಯೋಗ ಶಿಕ್ಷಕಿ. ತಾಯಿ ಶಾಂಭವಿ ಇಷ್ಟೊಂದು ಸಾಧನೆ ಮಾಡದಿದ್ದರೂ ತಾಯಿಯ ಕನಸು ನನಸು ಮಾಡುತ್ತಿರುವ ಸೃಷ್ಟಿ ಯೋಗಾಸನದಲ್ಲಿ ಸೃಷ್ಟಿಸಿರುವ ದಾಖಲೆ ಮೆಚ್ಚುವಂಥದ್ದು.

ನೇಪಾಳ, ಜಮ್ಮುವಿನಲ್ಲಿ ನಡೆದ ಯೋಗಾಸನ ಪಂದ್ಯಾವಳಿಗಳಲ್ಲಿ ಕಂಚು ಮತ್ತು ಚಿನ್ನದ ಪದಕ ಗೆದ್ದಿದ್ದಾಳೆ. ಕಳೆದ 3 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿರುವ ಈಕೆ ತನ್ನ ದೇಹವನ್ನು ಹೇಗೆ ಬೇಕಾದರೂ ತಿರುಗಿಸುವ ಸಾಮರ್ಥ್ಯ ಹೊಂದಿದ್ದಾಳೆ. ಈ ಯೋಗ ಎಲ್ಲರಿಗೂ ಒಲಿಯುವಂಥದ್ದಲ್ಲ. ಸಾಕಷ್ಟು ಪರಿಶ್ರಮ, ಶ್ರಮ ಬೇಕು. ಇದಕ್ಕೆ ಕಠಿಣ ಅಭ್ಯಾಸ ಇರಲೇಬೇಕು.

ಆನ್‌ಲೈನ್ ವಿಶ್ವ ಯೋಗ ಕಪ್ “ದಿ ಬೆಸ್ಟ್ ಪರ್ಫಾರ್ಮೆನ್ಸ್ ಯೋಗ ಪ್ರಶಸ್ತಿ”ಯೂ ಈಕೆಗೆ ಬಂದಿದೆ. ಇಲ್ಲಿಯವರೆಗೆ 150 ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಸೃಷ್ಟಿ ಒಂದಲ್ಲಾ ಒಂದು ಪದಕ ಗೆದ್ದಿದ್ದಾಳೆ. ಈ ಪೈಕಿ ಅತಿ ಹೆಚ್ಚು ಗೋಲ್ಡ್ ಮೆಡಲ್ ಗೆದ್ದಿರುವುದು ಸಾಧನೆಗೆ ಹಿಡಿದ ಕೈಗನ್ನಡಿ. ಒಟ್ಟು 52 ಚಿನ್ನದ ಪದಕ ಗೆದ್ದಿರುವ ಈಕೆಗೆ ಗುರು ಮತ್ತು ತರಬೇತುದಾರರು ತಾಯಿಯೇ.

ಅಂತರರಾಷ್ಟ್ರೀಯ, ರಾಷ್ಟ್ರೀಯ, ಅಂತರರಾಜ್ಯ, ರಾಜ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಇತ್ತೀಚೆಗೆ ಅವರು ತಾಲೂಕು, ಜಿಲ್ಲೆ, ವಿಭಾಗ ಮತ್ತು ರಾಜ್ಯ ಮತ್ತು ರಾಷ್ಟ್ರೀಯ ಎಸ್‌ಜಿಎಫ್‌ಐ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಈ ವರ್ಷ ಜೈಪುರದಲ್ಲಿ ನಡೆದ ಭಾರತದ ಸಾಂಪ್ರದಾಯಿಕ ಯೋಗಾಸನ 67 ನೇ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ 4 ನೇ ಸ್ಥಾನವನ್ನು ಗೆದ್ದಿದ್ದಾಳೆ.

ಇದುವರೆಗೆ 150 ಪಂದ್ಯಾವಳಿಗಳಲ್ಲಿ ಪಾಲ್ಗೊಂಡು ಚಿನ್ನದ ಪದಕ-52, ಬೆಳ್ಳಿ-4, ಕಂಚು-4, ಪ್ರಶಸ್ತಿಗಳು 20 ಬಂದಿದ್ದು, ಆರು ದಾಖಲೆಗಳನ್ನು ಮಾಡಿದ ಶ್ರೇಯ ಈಕೆಯದ್ದು.

ಬ್ಯೂಟಿಫುಲ್ ಸ್ಮೈಲ್ ಅವಾರ್ಡ್:

ಇನ್ನು 2020ರಲ್ಲಿ ನಡೆದ ಸ್ಪರ್ಧೆಯಲ್ಲಿ ಬ್ಯೂಟಿಫುಲ್ ಸ್ಮೈಲ್ ಅವಾರ್ಡ್ ಸಹ ಸೃಷ್ಟಿಗೆ ಸಿಕ್ಕಿದೆ. ಕೇವಲ ಯೋಗಾಸನ ಸ್ಪರ್ಧೆಯಲ್ಲಿ ಮಾತ್ರ ಸಾಧನೆ ಮಾಡದೇ, ಬೇರೆ ಬೇರೆ ಕ್ಷೇತ್ರಗಳಲ್ಲಿಯೂ ಹೆಸರು ಸಂಪಾದನೆ ಮಾಡಿರವ ಈಕೆಯದ್ದು ಬಹುಮುಖ ಪ್ರತಿಭೆ.

ಯೋಗದತ್ತ ಆಸಕ್ತಿ ತಳೆದಿದ್ದು ಯಾಕೆ…?

ನನ್ನ ತಾಯಿ ಯೋಗ ಶಿಕ್ಷಕಿ. ಬೇರೆ ಮಕ್ಕಳಿಗೂ ಹೇಳಿಕೊಡುತ್ತಿದ್ದನ್ನು ನೋಡುತ್ತಿದ್ದೆ. ನನಗೂ ಯೋಗ ಮಾಡಬೇಕೆಂಬ ಆಸೆ ಬಂತು. ತಾಯಿಯ ಬಳಿ ಕೇಳಿಕೊಂಡೆ. ಎರಡನೇ ಲಾಕ್ ಡೌನ್ ವೇಳೆ ಯೋಗ ಶುರು ಮಾಡಿದೆ. ಆಮೇಲೆ ಯೋಗಾಸನ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಶುರು ಮಾಡಿದೆ. ಸ್ಪರ್ಧೆಗಳಲ್ಲಿ ಪದಕ ಬರುತ್ತಾ ಹೋಯಿತು. ಮತ್ತಷ್ಟು ಕಠಿಣ ಅಭ್ಯಾಸ ಮಾಡಿದೆ. ನನ್ನ ತಾಯಿ – ತಂದೆ ಕೊಟ್ಟ ಪ್ರೋತ್ಸಾಹ, ಶಾಲೆಯ ಶಿಕ್ಷಕರು, ಸ್ನೇಹಿತರು ನೀಡಿದ ಪ್ರೋತ್ಸಾಹ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂಬುದು ಕೆ. ವೈ. ಸೃಷ್ಟಿ ಹೇಳುವ ಮಾತು.

ಬಡತನದಲ್ಲಿ ಅರಳಿದ ಪ್ರತಿಭೆ:

ತಂದೆ ಯೋಗರಾಜ್ ಅವರು, ಹೋಮ್ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ತಾಯಿ ಯೋಗ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ಈ ದುಡಿಮೆಯಲ್ಲಿ ಜೀವನ ಸಾಗಿಸಬೇಕು. ತಂದೆ ತಾಯಿಯೂ ಯಾವುದಕ್ಕೂ ಕಡಿಮೆ ಮಾಡಿಲ್ಲ. ಎಲ್ಲೇ ಸ್ಪರ್ಧೆ ಇದ್ದರೂ ಸಾಲ ಮಾಡಿಯಾದರೂ ನನ್ನನ್ನು ಸ್ಪರ್ಧೆಗಳಿಗೆ ಕಳುಹಿಸಿಕೊಡುತ್ತಿದ್ದರು. ಹೆಚ್ಚಿನ ಪ್ರೋತ್ಸಾಹ ನೀಡಿದ್ದಾರೆ. ಶಿಕ್ಷಕರು ಸಹ ಧೈರ್ಯ ತುಂಬಿದರು. ಇನ್ನು ಹೆಚ್ಚಿನ ಸಾಧನೆ ಮಾಡಬೇಕೆಂಬ ಆಸೆ ಇದೆ. ಇದಕ್ಕಾಗಿ ಮತ್ತಷ್ಟು ಶ್ರಮ ವಹಿಸುವೆ ಎನ್ನುವ ಸೃಷ್ಟಿ, ಡ್ಯಾನ್ಸ್, ಯೋಗ, ಕರಾಟೆ ಹಾಗೂ ಡ್ರಾಯಿಂಗ್ ನಲ್ಲಿ ನಿಪುಣೆ.

ಓದಿನತ್ತಲೂ ಗಮನ ನೀಡಿರುವ ಸೃಷ್ಟಿ ಯೋಗಾಸನ ಮಾಡಲು ಶುರು ಮಾಡಿದ ಮೇಲೆ ಆರೋಗ್ಯ ಉತ್ತಮವಾಗಿದೆ. ಕಾಯಿಲೆಯೂ ಮಾಯವಾಗಿದೆ. ಯೋಗಾಸನ ಮಾಡುವುದರಿಂದ ಮನಸ್ಸಿಗೆ ಪ್ರಶಾಂತತೆ, ಸದೃಢ ಆರೋಗ್ಯ, ಓದಲು ಏಕಾಗ್ರತೆ ಸಾಧಿಸಲು ಸಾಧ್ಯವಾಗುತ್ತದೆ. ದಿನಕ್ಕೆ 2 ಗಂಟೆಯವರೆಗೆ ಅಭ್ಯಾಸ ಮಾಡುತ್ತೇನೆ ಎನ್ನುತ್ತಾಳೆ ಸೃಷ್ಟಿ.

ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಹರಿಹರದ ಶ್ರೀ ನೀಲಕಂಠೇಶ್ವರ ಪಬ್ಲಿಕ್ ಸ್ಕೂಲ್ ನ 8ನೇ ತರಗತಿ ವಿದ್ಯಾರ್ಥಿನಿ ಕೆ‌‌‌‌.ವೈ.ಸೃಷ್ಟಿ ಪ್ರಥಮ ಸ್ಥಾನ ಪಡೆದು ಶಾಲೆ, ಹರಿಹರ ತಾಲ್ಲೂಕು ಮತ್ತು ದಾವಣಗೆರೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈಕೆಯನ್ನು ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ಸ್ನೇಹಿತರು, ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment