ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿಗಳಿಗೆ ಆತ್ಮೀಯ ಬೀಳ್ಕೊಡುಗೆ

On: August 30, 2025 9:58 PM
Follow Us:
ಪೊಲೀಸ್
---Advertisement---

SUDDIKSHANA KANNADA NEWS/ DAVANAGERE/DATE:30_08_2025

ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹಾಗೂ ಸ್ವ ಇಚ್ಚೆಯಿಂದ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಈ ಸುದ್ದಿಯನ್ನೂ ಓದಿ: 16 ಬ್ಯಾಂಕ್ ಅಕೌಂಟ್ ಪತ್ತೆ, ಕರ್ನಾಟಕ ಸೇರಿ 10 ಕಡೆಗಳಲ್ಲಿ ವಂಚನೆ: ಸ್ಫೋಟಕ ಮಾಹಿತಿ ನೀಡಿದ “ಡಿಜಿಟಲ್ ಅರೆಸ್ಟ್” ಕೇಸ್ ನ 2ನೇ ಆರೋಪಿ!

ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ. ಎಸ್. ವಿಜಯ, ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಮ್ಮದ್ ಅಲ್ತಾಫ್, ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರಪ್ಪ, ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ ರಾಮಚಂದ್ರಪ್ಪ, ಸ್ವ-ಇಚ್ಛಾ ನಿವೃತ್ತಿ ಹೊಂದಿದ ಡಿಎಆರ್ ಘಟಕದ ಎ.ಆರ್.ಎಸ್.ಐ ಕೃಷ್ಣ ಸಿಂಗ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸನ್ಮಾನಿಸಿ ನಿವೃತ್ತಿ ಜೀವನಕ್ಕೆ ಶುಭಕೋರಿದರು.

ಜಿಲ್ಲಾ ಪೊಲೀಸ್ ವತಿಯಿಂದ ಅಧಿಕಾರಿಗಳನ್ನು ಬೀಳ್ಕೊಡಲಾಯಿತು. ಈ ವೇಳೆ ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ನಿವೃತ್ತ ಅಧಿಕಾರಿಗಳ ಕುಟುಂಬ ವರ್ಗದವರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment