ನವದೆಹಲಿ: ಗೂಡ್ಸ್ ರೈಲೊಂದು ಎಕ್ಸ್ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 60 ಜನರು ಗಾಯಗೊಂಡಿದ್ದಾರೆ. ನ್ಯೂ ಜಲ್ಪೈಗುರಿ ಬಳಿ ಸೋಮವಾರ ಬೆಳಿಗ್ಗೆ ಗೂಡ್ಸ್ ರೈಲು ಸೀಲ್ಡಾಗೆ ಹೋಗುವ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಎನ್ಎಫ್ಆರ್ನ ಕಟಿಹಾರ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ. ಅಗರ್ತಲಾದಿಂದ ಬಂದ 13174 ಕಾಂಚನಜುಂಗಾ ಎಕ್ಸ್ಪ್ರೆಸ್ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿ ಬಳಿ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದಾರೆ.