ಶಿವಮೊಗ್ಗ: ಆಂಬುಲೆನ್ಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಆಂಬುಲೆನ್ಸ್ ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿತ್ತು. ಬೈಕ್ ಶಿಕಾರಿಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಎಂದು ಗುರುತಿಸಲಾಗಿದೆ. ಮೃತರು ಹೊಸ ಜೋಗದ ನಿವಾಸಿಗಳು ಎನ್ನಲಾಗಿದೆ. ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.