Site icon Kannada News-suddikshana

ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ನಾಗಶೇಖರ್ ಕಾರು ಅಪಘಾತ!

ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ನಾಗಶೇಖರ್ (Nagasekhar) ಅವರು ಚಾಲನೆ ಮಾಡುತ್ತಿದ್ದ ಬೆಂಜ್ ಕಾರು ಅಪಘಾತವಾಗಿದ್ದು (Car accident), ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೌದು, ನಿರ್ದೇಶಕ ನಾಗಶೇಖರ್ ಅವರು ತಮ್ಮ ಕಾರು ಚಾಲನೆ ಮಾಡಿಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ ಬಸ್ ತಂಗುದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದು, ಬಳಿಕ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ನಾಗಶೇಖರ್‌ಗೆ ಸಣ್ಣಪುಟ್ಟ ಗಾಯವಾಗಿದ್ದು, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

Exit mobile version