SUDDIKSHANA KANNADA NEWS/ DAVANAGERE/ DATE:19-06-2024
ದಾವಣಗೆರೆ: ದಾವಣಗೆರೆ ಜಿಲ್ಲಾ ಶ್ರೀರಾಮಸೇನೆ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ.
ಮಣಿ ಸರ್ಕಾರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರು. ದಾವಣಗೆರೆ ನಗರದ ರಿಂಗ್ ರಸ್ತೆ ಬಳಿ ಈ ಅಪಘಾತ ಸಂಭವಿಸಿದ್ದು, ರಭಸ ಎಷ್ಟರ ಮಟ್ಟಿಗೆ ಇದೆ ಎಂದರೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಮಣಿ ಸರ್ಕಾರ್ ಅವರನ್ನು ಎಸ್. ಎಸ್. ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಆಗುತ್ತಿದ್ದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರು ಅಪಘಾತವಾಗುತ್ತಿದ್ದಂತೆ ಮಣಿ ಸರ್ಕಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಸದ್ಯಕ್ಕೆ ಪ್ರಾಣಾಪಾಯದಿಂದ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು, ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.
ಆಕ್ಸಿಡೆಂಟ್ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದರು. ಶ್ರೀರಾಮಸೇನೆ ಮುಖಂಡರು, ಕಾರ್ಯಕರ್ತರು ಸಹ ಸ್ಥಳಕ್ಕೆ ಆಗಮಿಸಿದರು. ಅಪಘಾತ ಹೇಗಾಯ್ತು ಎಂಬ ಕುರಿತಂತೆ ಮಾಹಿತಿ ಬರಬೇಕಿದೆ.