Site icon Kannada News-suddikshana

ಶಿವಪುರ-ಬೀರೂರು ರೈಲು ನಿಲ್ದಾಣದ ಮಧ್ಯೆ ರೈಲಿನಿಂದ ಬಿದ್ದು ಯುವಕ ಸಾವು

SUDDIKSHANA KANNADA NEWS/ DAVANAGERE/ DATE:26-10-2023

ಶಿವಮೊಗ್ಗ: ಶಿವಪುರ-ಬೀರೂರು ರೈಲು ನಿಲ್ದಾಣದ ಮಧ್ಯೆ ಕಿ.ಮೀ 02-900-03/000 ರಲ್ಲಿ ಸುಮಾರು 22 ವರ್ಷ ವಯಸ್ಸಿನ ಅಪರಿಚಿತ ಯುವಕನು ರೈಲಿನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಬೀರೂರಿಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.

ಮೃತನು ಸುಮಾರು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ತಲೆಯಲ್ಲಿ ಸುಮಾರು 3 ಇಂಚು ಉದ್ದದ ಕಪ್ಪು ಕೂದಲು, ಸುಮಾರು 1 ಇಂಚು ಉದ್ದದ ಗಡ್ಡ ಮೀಸೆ ಬಿಟ್ಟಿರುತ್ತಾನೆ. ಕಪ್ಪು ಬಣ್ಣದ ತುಂಬು ತೋಳಿನ ಶರ್ಟ್, ಆಕಾಶ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಶವವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಶೈತ್ಯಾಗಾರದಲ್ಲಿ ಇರಿಸಲಾಗಿದೆ.

ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ದೂ.ಸಂ: 08182-222974, 9480802124 ನ್ನು ಸಂಪರ್ಕಿಸಬಹದು ಎಂದು ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

 

Exit mobile version