SUDDIKSHANA KANNADA NEWS/ DAVANAGERE/ DATE:15-02-2025
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೋಗುತ್ತಿರುವವ ಸಂಖ್ಯೆ ಕಡಿಮೆ ಏನಿಲ್ಲ. ಶಿವರಾತ್ರಿ ಹತ್ತಿರವಾಗುತ್ತಿದ್ದಂತೆ ಕುಂಭಮೇಳಕ್ಕೆ ಲಕ್ಷಾಂತರ ಜನರು ಹೋಗುತ್ತಿದ್ದಾರೆ. ಸೊಬಗು ಕಣ್ತುಂಬಿಕೊಳ್ಳುವ ಧಾವಂತದಲ್ಲಿ ಆಗಮಿಸುವವರು ಸ್ವಲ್ಪ ಯಾಮಾರಿದರೂ ಅನಾಹುತ ಕಟ್ಟಿಟ್ಟ ಬುತ್ತಿ.
ಹೌದು. ಪ್ರಯಾಗ್‌ರಾಜ್‌ನಲ್ಲಿ ಭೀಕರ ಅಪಘಾತ ನಡೆದಿದ್ದು, ಮಹಾಕುಂಭದಲ್ಲಿ ಸ್ನಾನ ಮಾಡಲು ಬಂದಿದ್ದ 10 ಭಕ್ತರು ಮೃತಪಟ್ಟಿದ್ದಾರೆ. 19 ಮಂದಿ ಗಾಯಗೊಂಡಿದ್ದಾರೆ. ಬೊಲೆರೊ ಮತ್ತು ಬಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, ಇದುವರೆಗೆ 10 ಜನರು ಸಾವನ್ನಪ್ಪಿದ್ದಾರೆ. ಬಸ್ ಮತ್ತು ಬೊಲೆರೊದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ನಿವಾಸಿಗಳು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಯಾಗ್‌ರಾಜ್ ಡಿಸಿಪಿ ಘಟನೆಯನ್ನು ದೃಢಪಡಿಸಿದ್ದಾರೆ. ಮತ್ತೊಂದೆಡೆ, ಪೊಲೀಸ್ ಆಯುಕ್ತ ತರುಣ್ ಗಬಾ, ಡಿಎಂ ರವೀಂದ್ರ ಕುಮಾರ್ ಮಾಂಧಾದ್ ಮತ್ತು ಇತರ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೇಜಾದ ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ನಡೆದಿದೆ. ಭಕ್ತರಿಂದ ತುಂಬಿದ್ದ ಬೊಲೆರೊ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಬೊಲೆರೊದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 10 ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಲ್ಲರೂ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ನಿವಾಸಿಗಳು. ಸಂಗಮದಲ್ಲಿ ಸ್ನಾನ ಮಾಡಲು ಹೊರಟಿದ್ದರು ಎಂದು ಹೇಳಲಾಗುತ್ತಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 19 ಜನರು ಕೂಡ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಈ ಜನರು ಸಂಗಮದಲ್ಲಿ ಸ್ನಾನ ಮಾಡಿ ವಾರಣಾಸಿಗೆ ಹಿಂತಿರುಗುತ್ತಿದ್ದರು. ಎಲ್ಲಾ ಗಾಯಾಳುಗಳನ್ನು ರಾಮನಗರದ ಸಿಎಚ್‌ಸಿಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಜನರು ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ನಿವಾಸಿಗಳು. ಅಪಘಾತದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ ಯೋಗಿ ಸಂತಾಪ ಸೂಚಿಸಿದ್ದಾರೆ.









