SUDDIKSHANA KANNADA NEWS/ DAVANAGERE/ DATE:17-01-2024
ದಾವಣಗೆರೆ: ಓಮಿನಿ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು ಸಮ್ಮಸಗಿ ರಾಜ್ಯ
ಹೆದ್ದಾರಿಯಲ್ಲಿ ಸಂಭವಿಸಿದೆ.
ಚನ್ನಗಿರಿ ತಾಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಗಂಗಮ್ಮ (80) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ರನ್ನಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಗೆ ಸಂತೇಬೆನ್ನೂರು ಕಡೆಯಿಂದ ಚನ್ನಗಿರಿಗೆ ಹೋಗುತ್ತಿದ್ದ ಓಮಿನಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸಾವನ್ನಪ್ಪಿದ್ದಾರೆ. ಹೊಡೆತದ ರಭಸಕ್ಕೆ ಓಮಿನಿ ನುಜ್ಜುಗುಜ್ಜಾಗಿ ಜಖಂಗೊಂಡಿದೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.