Site icon Kannada News-suddikshana

ಕೆ ಎಸ್ ಆರ್ ಟಿ ಸಿ ಬಸ್ – ಒಮ್ನಿ ನಡುವೆ ಡಿಕ್ಕಿ: ಸ್ಥಳದಲ್ಲಿಯೇ ಮೂವರ ದುರ್ಮರಣ

SUDDIKSHANA KANNADA NEWS/DAVANAGERE/DATE:11-04-2024

ದಾವಣಗೆರೆ: ಕೆ ಎಸ್ ಆರ್ ಟಿ ಸಿ ಹಾಗೂ ಒಮ್ನಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹೊನ್ನಾಳಿ – ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದಲ್ಲಿ ನಡೆದಿದೆ.

ಅಪಘಾತದ ರಭಸಕ್ಕೆ ಒಮ್ನಿ ನುಜ್ಜುಗುಜ್ಜಾಗಿದೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಒಮ್ನಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಒಮ್ನಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ಹೇಳಲಾಗಿದೆ.

ಒಬ್ಬರು ಹರಮಘಟ್ಟದವರು ಹಾಗೂ ಮತ್ತಿಬ್ಬರು ಸೂರಗೊಂಡನಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದ್ದು, ಹೆಸರು ಗೊತ್ತಾಗಿಲ್ಲ. ಒಮ್ನಿನಲ್ಲಿದ್ದ ಒಬ್ಬರಿಗೆ ತೀವ್ರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿದ್ದ ಕೆಲವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಹರಮಘಟ್ಟದ ನಂಜುಂಡಪ್ಪ, ರಾಕೇಶ್ ಹಾಗೂ ದೇವರಾಜ್ ಎಂದು ಹೇಳಲಾಗಿದೆ. 

ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ನ್ಯಾಮತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Exit mobile version