SUDDIKSHANA KANNADA NEWS/ DAVANAGERE/ DATE:04-03-2025
ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ವ್ಯವಹಾರ ಅಧ್ಯಯನ ವಿಭಾಗದ ವತಿಯಿಂದ ಮಾರ್ಚ್ 5ರಂದು ಏರ್ಪಡಿಸಿರುವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರನಟಿ ಆದಿತಿ ಪ್ರಭುದೇವ ಭಾಗವಹಿಸಲಿದ್ದಾರೆ.
ವಿಶ್ವವಿದ್ಯಾನಿಲಯದ ಸಮಾಜ ವಿಜ್ಞಾನ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಆದಿತಿ ಉದ್ಘಾಟಿಸುವರು. ಉದ್ಯಮಿ ಸರೋಜಾ ಎನ್. ಪಾಟೀಲ, ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಗಾಯಿತ್ರಿ ಭಾಗವಹಿಸುವರು.
ಕುಲಪತಿ ಪ್ರೊ.ಬಿ.ಡಿ.ಕುಂಬಾರ, ಕುಲಸಚಿವ ಪ್ರೊ.ಆರ್.ಶಶಿಧರ, ಹಿರಿಯ ಪ್ರಾಧ್ಯಾಪಕ ಪ್ರೊ.ಜೆ.ಕೆ.ರಾಜು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕಿ ಡಾ.ಆರ್.ಸುನಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.