SUDDIKSHANA KANNADA NEWS/ DAVANAGERE/ DATE:18-11-2024
ದಾವಣಗೆರೆ: ಅಡಿಕೆ ಬೆಳೆ ಮೇಲೆ ನಿಷೇಧದ ತೂಗುಗತ್ತಿ ಮೊದಲಿನಿಂದಲೂ ಇದೆ. ಆದ್ರೆ, ಇದೀಗ ಮತ್ತೊಂದು ವಿಚಾರ ಸೇರ್ಪಡೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆ ಬೆಳೆ ಕ್ಯಾನ್ಸರ್ ಕಾರಕ ಎಂದು ಶಿಫಾರಸ್ಸು ಮಾಡಿದ್ದು ಆತಂಕಕ್ಕೆ ಕಾರಣವಾಗಿದೆ. ಈ ಶಿಫಾರಸ್ಸಿಗೆ ಅಡಿಕೆ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ, ಶಿವಮೊಗ್ಗ,ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಬೆಳೆಯಲಾಗುತ್ತದೆ. ಪ್ರಮುಖ ವಾಣಿಜ್ಯ ಬೆಳೆಯೂ ಆಗಿದೆ. ಮೊದಲಿನಿಂದಲೂ ಅಡಿಕೆ ಮೇಲಿನ ಗುಮ್ಮ ಇದೆ. ಈಗ ಮುಂದುವರಿದಿದೆ. ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸ್ಸು ಆಘಾತ ತಂದಿದೆಯಷ್ಟೇ ಅಲ್ಲ, ರೈತರ ಸಿಟ್ಟಿಗೂ ಕಾರಣವಾಗಿದೆ.
ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಮತ್ತೆ ಕ್ಯಾನ್ಸರ್ ಕಾರಕ ಪಟ್ಟ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಗಸಂಸ್ಥೆಯೊಂದು ಅಡಕೆ ಬಳಕೆಯನ್ನು ನಿಯಂತ್ರಣ ಮಾಡಿದಲ್ಲಿ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ಕಡಿಮೆ ಮಾಡಬಹುದಾಗಿದೆ ಎಂದು ವರದಿ ಸಲ್ಲಿಸಿದ್ದು, ಇದು ಅಡಕೆ ಬಳಕೆ ಮೇಲೆ ನಿಯಂತ್ರಣ ಹೇರುವ ಆತಂಕ ಮೂಡಿಸಿದೆ ಎಂದು ಹೇಳಲಾಗುತ್ತಿದೆ.
ತಂಬಾಕು ಮಾದರಿಯಲ್ಲಿ ಅಡಿಕೆ ನಿಯಂತ್ರಣಕ್ಕೆ ಕಾರಣವಾಗುವ ಆತಂಕ ಅಡಿಕೆ ಬೆಳೆಗಾರರಲ್ಲಿ ಮೂಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕ್ಯಾನ್ಸರ್ ಸಂಶೋಧನಾ ಸಂಸ್ಥೆ ಅಡಿಕೆಯ ಕುರಿತು ಮತ್ತೆ ಮಹತ್ವದ ವರದಿ ಸಲ್ಲಿಸಲಾಗಿದ್ದು, ಅಡಕೆ ಕ್ಯಾನ್ಸರ್ ಕಾರಕ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬಳಕೆಗೆ ನಿಯಂತ್ರಣ ಹೇರಲು ಶಿಫಾರಸು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಅಡಕೆ ಬಳಕೆಯನ್ನು ನಿಯಂತ್ರಿಸಿದರೆ ಬಾಯಿ ಕ್ಯಾನ್ಸರ್ ತಗ್ಗಿಸಬಹುದೆಂದು ವರದಿ ಸಲ್ಲಿಸಲಾಗಿದೆ. ಈ ಹಿಂದೆಯೇ ಸುಪ್ರೀಂ ಕೋರ್ಟ್ ನಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಎಂಬುದರ ಬಗ್ಗೆ ಈಗಾಗಲೇ ಕಾನೂನು ಸಮರ ನಡೆಯುತ್ತಿದ್ದು, ಅಡಿಕೆಯು ಆರೋಗ್ಯದಾಯಕ ಎಂದು ಸಾಬೀತುಪಡಿಸಲಾಗಿದೆ. ಇದರ ನಡುವೆ ಇಂತಹುದೊಂದು ವರದಿ ಸಲ್ಲಿಕೆಯಾಗಿರುವುದು ಆಘಾತಕ್ಕೆ ಕಾರಣವಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಸಂಘ ಸಂಸ್ಥೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಅಂಡ್ ಕ್ಯಾನ್ಸರ್ 2024ರ ಅಕ್ಟೋಬರ್ 9ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಎಂದು ಹೇಳಲಾಗಿದೆ. ಈ ವರದಿ
ದಿ ಲ್ಯಾನ್ಸೆಟ್ ಅಂಕಾಲಜಿ ಎಂಬ ಅಂತರಾಷ್ಟ್ರೀಯ ಜರ್ನಲ್ ನಲ್ಲಿ ಈ ವರದಿ ಪ್ರಕಟವಾಗಿದೆ ಎಂದು ತಿಳಿದು ಬಂದಿದೆ. ಅಡಿಕೆ ಬೆಳೆಗಾರರು ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸ್ಸಿಗೆ ಕೆಂಡಮಂಡಲರಾಗಿದ್ದು, ಅಡಿಕೆ ಆರೋಗ್ಯಕ್ಕೆ ಹಾನಿ ಉಂಟು ಮಾಡಲ್ಲ. ಗುಟ್ಕಾ ಬಳಕೆಯಿಂದ ಆಗುತ್ತದೆ. ಪೇಯ್ಟಿಂಗ್ ಸೇರಿದಂತೆ ಇತರೆ ಕೆಲಸಗಳಿಗೆ ಬಳಕೆಯಾಗುತ್ತದೆ. ಅಡಿಕೆ ಸಾಕಷ್ಟು ಇತಿಹಾಸ ಇದೆ. ಮದುವೆ ಸೇರಿದಂತೆ ಪವಿತ್ರಾ ಕಾರ್ಯಕ್ರಮಗಳಿಗೆ ಬಳಕೆಯಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮಾಡಿರುವ ಶಿಫಾರಸ್ಸಿನ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ ಎಂಬ ಅನುಮಾನವೂ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ಅಡಿಕೆ ಬೆಳೆಗಾರರು.