SUDDIKSHANA KANNADA NEWS/ DAVANAGERE/ DATE:08-03-2024
ದಾವಣಗೆರೆ: ಭಾರತೀಯ ಜನತಾ ಪಾರ್ಟಿ, ದಾವಣಗೆರೆ, ಜಿಲ್ಲಾ ಎಸ್.ಟಿ.ಮೋರ್ಚಾ ವತಿಯಿಂದ ಮಾ. 11ರ ಬೆಳಿಗ್ಗೆ 11ಕ್ಕೆ ವಿನೋಬನಗರದ ದಾವಣಗೆರೆ ಹರಿಹರ ಅರ್ಬನ್ ಕೋ.ಆಪರೇಟಿವ್ ಸಮುದಾಯ ಭವನದಲ್ಲಿ ಪರಿಶಿಷ್ಟ ಪಂಗಡಗಳ ಮುನ್ನಡೆ ಸಮಾವೇಶ ಆಯೋಜಿಸಲಾಗಿದೆ ಎಂದು ಎಸ್.ಟಿ.ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಎಸ್.ಟಿ. ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ, ಪ್ರಭಾರಿ ವಿ.ಸುನೀಲ್ ಕುಮಾರ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ರಾಜುಗೌಡ, ಎಸ್.ಎ.ರವೀಂದ್ರನಾಥ್, ಹರಿಹರ ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ, ಪ್ರೊ. ಎನ್.ಲಿಂಗಣ್ಣ, ಎಂ.ಬಸವರಾಜ ನಾಯ್ಕ, ಮಾಡಾಳು ವಿರೂಪಾಕ್ಷಪ್ಪ, ಗುರುಸಿದ್ದನಗೌಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ, ಎಸ್.ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಯಶವಂತರಾವ್ ಜಾಧವ್ ಮತ್ತಿತರರು ಆಗಮಿಸಲಿದ್ದಾರೆ ಎಂದರು.
ಎಸ್.ಟಿ.ಮೋರ್ಚಾ ರಾಜ್ಯ ಕಾರ್ಯದರ್ಶಿ ಬೆಳ್ಳಿ ಗಂಗಾಧರ, ಮಹಾಂತೇಶ್ ನಾಯಕ, ರೈತಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ, ಹೆಚ್.ಎಸ್.ಶಿವಕುಮಾರ್, ಬಿ.ಜಿ.ಅಜೇಯ್ಕುಮಾರ, ಮಾಡಾಳು ಮಲ್ಲಿಕಾರ್ಜುನ್, ಗುಮ್ಮನೂರು
ಶ್ರೀನಿವಾಸ, ಹೆಚ್.ಬಿ.ದುರುಗೇಶ ಸೇರಿದಂತೆ ಇತರೆ ಗಣ್ಯರು ಆಗಮಿಸಲಿದ್ದು, ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಎಸ್. ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಎಸ್.ಕೃಷ್ಣಕುಮಾರ್, ಗುಮ್ಮನೂರು ಶ್ರೀನಿವಾಸ್, ಹೆಚ್.ಬಿ.ದುರುಗೇಶ್, ಮಾರುತಿ, ಪಾಪಲಿಂಗಪ್ಪ, ರಮೇಶ್, ಓಂಕಾರಪ್ಪ ಮತ್ತಿತರರು ಹಾಜರಿದ್ದರು.