Site icon Kannada News-suddikshana

ಟಿಕೆಟ್ ಸಿಕ್ಕ ಬಳಿಕ ಜವಾಬ್ದಾರಿ ಹೆಚ್ಚಿದೆ, ಹೈಕಮಾಂಡ್ ಆಶಯಕ್ಕೆ ತಕ್ಕಂತೆ ಗೆದ್ದು ಕೈ ಬಲಪಡಿಸಬೇಕಿದೆ: ಡಾ. ಪ್ರಭಾ ಮಲ್ಲಿಕಾರ್ಜುನ

SUDDIKSHANA KANNADA NEWS/ DAVANAGERE/ DATE:22-03-2024

ದಾವಣಗೆರೆ: ಅಧಿಕೃತವಾಗಿ ಟಿಕೆಟ್ ಘೋಷಣೆಯಾಗಿದೆ. ಇದರೊಂದಿಗೆ ನನ್ನ ಜವಾಬ್ದಾರಿ ಕೂಡ ಹೆಚ್ಚಿದೆ. ಹೈಕಮಾಂಡ್ ಆಶಯಕ್ಕೆ ತಕ್ಕಂತೆ ದಾವಣಗೆರೆ ಲೋಕಸಭೆ ಕ್ಷೇತ್ರವನ್ನು ಗೆದ್ದು ಪಕ್ಷದ ಕೈ ಬಲಪಡಿಸಬೇಕಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಹಾಗೂ ಪುತ್ರ ಸಮರ್ಥ್ ಶಾಮನೂರು ಅವರು ದುರ್ಗಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಪ್ರತಿಕ್ರಿಯೆ ನೀಡಿದರು.

ಮಾವ ಡಾ. ಶಾಮನೂರು ಶಿವಶಂಕರಪ್ಪ, ಪತಿ ಎಸ್.ಎಸ್ ಮಲ್ಲಿಕಾರ್ಜುನ್, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಶಾಸಕರು, ಹಿತೈಷಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಎಲ್ಲಾ ಹಂತದ ನಾಯಕರ ಸಹಕಾರದೊಂದಿಗೆ ಮುನ್ನಡೆಯುವೆ ಎಂದು ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

Exit mobile version