SUDDIKSHANA KANNADA NEWS/ DAVANAGERE/ DATE:17-10-2024
ಬೆಂಗಳೂರು: ರಾಜ್ಯ ಸರ್ಕಾರದ ಆತ್ಮ ಯೋಜನೆಯಡಿ ಕೃಷಿ ವಲಯದಲ್ಲಿ ವಿವಿಧ ಚಟುವಟಿಕೆಗಳಲ್ಲಿ ತಮ್ಮದೇ ಆದ ಅಮೂಲ್ಯ ಅನ್ವೇಷಣೆ, ವಿಶಿಷ್ಟ ಸಾಧನೆಯ ಮೂಲಕ ರೈತ ಸಮುದಾಯಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿರುವ ಜಿಲ್ಲೆಯ ರೈತರಿಂದ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಕೃಷಿ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ದಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ ಮತ್ತು ಹಸಿರುಮನೆ, ಕಸಿ ಅಭಿವೃದ್ದಿ, ಸಸ್ಯಕಾಶಿ ಇತ್ಯಾದಿ. ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ ಮತ್ತು ಆಡು-ಕುರಿ-ಮೊಲ ಸಾಕಾಣಿಕೆ ಇತ್ಯಾದಿಗಳಲ್ಲಿ ವಿಶಿಷ್ಟ ಸಾಧನೆ ಮಾಡಿರಬೇಕು
ಅರ್ಜಿದಾರರು ತಾವು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕು.
ಆಸಕ್ತ ರೈತರು ಜಂಟಿ ಕೃಷಿ ನಿರ್ದೇಶಕರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಹಾಗೂ ಸಾಧನೆಗಳ ವಿವರ ಬರೆದು ನವೆಂಬರ್ 8, 2024 ರ ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ