Site icon Kannada News-suddikshana

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ರಾಜ್ಯದಲ್ಲಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ವಿದೇಶಿ ಮದ್ಯಕ್ಕೆ ಹೋಲಿಸಿದರೆ ಅಗ್ಗದ ಬೆಲೆಯ ಮದ್ಯಗಳ ಮಾರಾಟ ಹೆಚ್ಚಿದೆ ಹೀಗಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಲು ಚಿಂತನೆ ನಡೆಸಿದೆ.

ಈ ಬಗ್ಗೆ ಮಾತಾನಾಡಿದ ಮದ್ಯ ಮಾರಾಟಗಾರರು, ಅಧಿಕೃತವಾಗಿ ದರ ಏರಿಕೆಯ ಆದೇಶ ಇನ್ನೂ ಆಗಿಲ್ಲ. ಆದರೆ ದರ ಏರಿಕೆ ಮಾಡುವ ಬಗ್ಗೆ ಮಾತುಗಳು ಕೇಳಿ ಬರ್ತಿವೆ ಎಂದು ರಾಮಕೃಷ್ಣ ಬಾರ್ ಆ್ಯಂಡ್​ ರೆಸ್ಟೋರೆಂಟ್ ಮಾಲೀಕರು ಹೇಳಿದರು. ರಾಜ್ಯದಲ್ಲಿ 2023ರ ಜುಲೈನಲ್ಲಿ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲಾಗಿತ್ತು. ನಂತರ ಲಿಕ್ಕರ್ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದವು. ನಂತರ ಜನ ಸಾಮಾನ್ಯರು ಬಳಕೆ ಮಾಡುವ ಲಿಕ್ಕರ್ ದರವನ್ನ 20 ರೂಪಾಯಿಗೆ ಏರಿಕೆ ಮಾಡಿತ್ತು.

Exit mobile version