Site icon Kannada News-suddikshana

ಜೂನ್ 01 ರಿಂದ 3 ರವರೆಗೆ ದ.ಕ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಮಂಗಳೂರು : ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮ್ಯದದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಪಿಲರಿಗಳು, ಸ್ಟಾರ್ ಹೊಟೇಲ್‍ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.

Exit mobile version