SUDDIKSHANA KANNADA NEWS/ DAVANAGERE/ DATE:13-02-2024
ದಾವಣಗೆರೆ: ಸಂತ ಸೇವಾಲಾಲ್ರವರ 285ನೇ ಜಯಂತ್ಸೋವ ಹಾಗೂ ವಿವಿಧ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ.14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸುವರು.
ಹಾತಿರಾಂ ಬಾವಾಜಿ ಸಭಾಂಗಣವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಸಮಿತಿಯ ನವೀಕೃತ ಆಡಳಿತ ಕಚೇರಿಯನ್ನು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಉದ್ಘಾಟಿಸುವರು. ವಲಸೆ ಮಕ್ಕಳ ಶಂಕುಸ್ಥಾಪನೆಯನ್ನು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಉದ್ಘಾಟಿಸುವರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಧರ್ಮಶಾಲಾ
ಕಟ್ಟಡ ಕಾಮಗಾರಿಯ ಮೊದಲ ಮಹಡಿ ಉದ್ಘಾಟಿಸುವರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಟ್ಟಡವನ್ನು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಉದ್ಘಾಟಿಸುವರು.
ಸೇವಾಲಾಲ್ ಸರೋವರವನ್ನು ಮಹರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವ ಸಂಜಯ್ ಡಿ ರಾಥೋಡ್ ಉದ್ಘಾಟನೆ ನೆರವೇರಿಸಲಿದ್ದಾರೆ.
ಹೊನ್ನಾಳಿ ಕ್ಷೇತ್ರದ ಶಾಸಕ ಡಿ. ಜಿ. ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಘನ ಉಪಸ್ಥಿತರಾಗಿರುವರು. ಶಾಸಕ ಪ್ರಕಾಶ್.ಕೆ.ರಾಠೋಡ್ ಬಂಜಾರ ಭವನದ ನಿರ್ವಹಣಾ ಆಪ್ ಬಿಡುಗಡೆಗೊಳಿಸುವರು. ಮಾಜಿ ಸಚಿವರು ಹಾಗೂ ಉನ್ನತ ಮಟ್ಟದ ಸಲಹಾ ಸಮಿತಿ ಅಧ್ಯಕ್ಷ ಪಿ.ಟಿ.ಪರಮೇಶ್ವರನಾಯ್ಕ ಸೇವಾಲಾಲ್ ಉಪಹಾರ ದರ್ಶಿನಿ ಉದ್ಘಾಟಿಸುವರು. ಕರ್ನಾಟಕ ಹಾಲು ಮಹಾಮಂಡಳಿಯ ಅಧ್ಯಕ್ಷರಾದ ಎಸ್.ಬೀಮಾನಾಯ್ಕ ದಿವ್ಯಾಂಗಿಗಳು ಮತ್ತು ಹಿರಿಯ ನಾಗರೀಕರ ಸಹಾಯಕ್ಕೆ ವಿದ್ಯುತ್ ಚಾಲಿತ ವಾಹನ ಅರ್ಪಣೆ ಮಾಡುವರು.
ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಿವಮೊಗ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರಾದಾ ಪೂರ್ಯಾನಾಯ್ಕ, ಲೋಕಸಭಾ ಸದಸ್ಯ ಡಾ.ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವರು ಹಾಗೂ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, , ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ. ತೇಜಸ್ವಿನಿಗೌಡ, ಎಸ್.ಎಲ್ ಭೋಜೇಗೌಡ, ವೈ.ಎ. ನಾರಾಯಣಸ್ವಾಮಿ, ಚಿದಾನಂದ. ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್, ಔರಾದ್ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಭು ಬಿ ಚವ್ಹಾಣ್, ಚಿಂಚೋಳಿ ಶಾಸಕ ಡಾ.ಅವಿನಾಶ್ ಜಾಧವ್, ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯ್ಕ್, ಹೂವಿನಹಡಗಲಿ ಶಾಸಕ ಕೃಷ್ಣನಾಯ್ಕ, ಶಿರಹಟ್ಟಿ ಶಾಸಕ ಡಾ.ಚಂದ್ರ ಲಮಾಣಿ, ಕೇಂದ್ರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷರಾಧ ಎಂ.ಬಸವರಾಜ ನಾಯ್ಕ, ಮಾಜಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಚಿನ್ನಿಕಟ್ಟಿ ಗ್ರಾ.ಪಂ ಅಧ್ಯಕ್ಷರಾದ ಲಕ್ಷ್ಮೀ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಕ.ತಾ.ಅ.ನಿ.ನಿ, ವ್ಯವಸ್ಥಾಪಕ ನಿರ್ದೇಶಕರಾದ ಎಲ್.ಶಿವಶಂಕರ್ ನಾಯಕ್, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ
ನಿರ್ವಹಣಾ ಸಮಿತಿಯ ಹನುಮಂತನಾಯ್ಕ, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.