SUDDIKSHANA KANNADA NEWS/ DAVANAGERE/ DATE:12-01-2024
ಶಿವಮೊಗ್ಗ: ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭುವಿನ ಹೆಸರನ್ನು ಶಿವಮೊಗ್ಗದ ಫ್ರೀಡಂಪಾರ್ಕಿಗೆ ಇಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆಯವರೇ ಆದ ಬಸವಾದಿ ಶರಣ ಅಲ್ಲಮ ಪ್ರಭುವಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಕೊಡುವ ಗೌರವ ಎಂದು ಬಣ್ಣಿಸಿದರು.
ಮುಖ್ಯಮಂತ್ರಿಗಳು ಅಲ್ಲಮ ಪ್ರಭುವಿನ ಹೆಸರನ್ನು ಘೋಷಿಸುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಮಂದಿ ಕುಳಿತಿದ್ದ ಕುರ್ಚಿಗಳಿಂದ ಮೇಲೆದ್ದು ಚಪ್ಪಾಳೆ ತಟ್ಟಿ ಕುಣಿದು, ಕೂಗಿ ಸಂಭ್ರಮದಿಂದ ಸ್ವಾಗತಿಸಿದರು.