ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

GOOD NEWS: ಸೆಪ್ಟೆಂಬರ್ 2 ರಿಂದ ಜಿಲ್ಲೆಯೊಳಗೆ ಯಾವುದೇ ತಾಲ್ಲೂಕಿನಲ್ಲಿ ಆಸ್ತಿಗಳ ನೊಂದಣಿಗೆ ಅವಕಾಶ

On: August 28, 2024 9:01 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:28-08-2024

ದಾವಣಗೆರೆ: ಆಸ್ತಿಗಳ ನೊಂದಣಿಯನ್ನು ಯಾವ ಸ್ಥಳದಲ್ಲಾದರೂ ನೊಂದಣಿ ಮಾಡಿಸಲು ಅವಕಾಶ ಕಲ್ಪಿಸಿದ್ದು ಸೆಪ್ಟೆಂಬರ್ 2 ರಿಂದ ಜಿಲ್ಲೆಯೊಳಗೆ ಯಾವುದೇ ತಾಲ್ಲೂಕಿನಲ್ಲಿ ನೊಂದಣಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೆÉೀರಿಯಲ್ಲಿ ನೋಂದಾಯಿಸಿಕೊಳ್ಳಬಹುದು.

ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವರು ರೀತಿಯಲ್ಲಿ ಉಪಯುಕ್ತವಾಗಿದ್ದು ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ, ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು, ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ,

ಉಪನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.  ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತ ಕಚೇರಿ ಆಯ್ಕೆ ಮಾಡಿಕೊಂಡು ನೊಂದಣಿ ಮಾಡಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment