SUDDIKSHANA KANNADA NEWS/ DAVANAGERE/ DATE:17-12-2024
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಶೌಚಾಲಯಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಸಮೀಕ್ಷೆ ಕುರಿತು ನವಂಬರ್ 1 ರಿಂದ 15 ರ ಅವಧಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರು ಹಾಗೂ ಕಿರಿಯ, ಸಹಾಯಕ ಅಭಿಯಂತರರು (ಒಳಚರಂಡಿ) ಇವರುಗಳಿಂದ ಸಮೀಕ್ಷೆ ಕಾರ್ಯ ನಿರ್ವಹಿಸಲಾಗಿರುತ್ತದೆ.
ಯಾವುದೇ ಅನೈರ್ಮಲ್ಯ ಶೌಚಾಲಯಗಳು ಕಂಡು ಬಂದಿರುವುದಿಲ್ಲ. ಸಮೀಕ್ಷೆ ಅವಧಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳೆಂದು 149 ಸ್ವಯಂ ಘೋಷಣಾ ಅರ್ಜಿಗಳು ಸ್ವೀಕೃತವಾಗಿದ್ದು, ಸ್ಥಳ ಪರಿಶೀಲಿಸಲಾಗಿ, ಈ ಅರ್ಜಿದಾರರು ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಯದಲ್ಲಿ ತೊಡಗಿರದ ಕಾರಣ ಈ ಅರ್ಜಿಗಳು ತಿರಸ್ಕೃತಗೊಂಡಿದ್ದು, ಸ್ವೀಕೃತ ಅರ್ಜಿಗಳ ಪಟ್ಟಿಯನ್ನು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಡಿ.26 ರೊಳಗೆ ಪೂರಕ ದಾಖಲೆಗಳೊಂದಿಗೆ ಆಯುಕ್ತರು, ದಾವಣಗೆರೆ ಮಹಾನಗರ ಪಾಲಿಕೆ ಸಲ್ಲಿಸಬೇಕೆಂದು ತಿಳಿಸಿದ್ದಾರೆ.