ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬಿ. ವೈ. ವಿಜಯೇಂದ್ರ ಜೊತೆ ಕೇಂದ್ರ ಸಚಿವ ಅಮಿತ್ ಶಾ ಜೊತೆ ಗೌಪ್ಯ ಮಾತುಕತೆ ನಡೆಸಿದ್ಯಾಕೆ?

On: January 1, 2025 10:01 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-01-2025

ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತಂತೆ ಕೇಂದ್ರ ಸಚಿವ ಅಮಿತ್ ಶಾ ಜೊತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಗೌಪ್ಯ ಮಾತುಕತೆ ನಡೆಸಿದ್ದಾರೆ.

ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ  ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನವನ್ನು ಕೋರಲಾಯಿತು ಎಂದು ಬಿ. ವೈ. ವಿಜಯೇಂದ್ರ ತಿಳಿಸಿದ್ದಾರೆ.

ದೇಶ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಮಾನ್ಯ ಅಮಿತ್ ಶಾ ಜೀ ಯವರು ಪಕ್ಷ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ. ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು ಎಂದು ಹೇಳಿದ್ದಾರೆ.

ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆದೆ ಎಂದು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment