ನವದೆಹಲಿ: ನೀಟ್ (NEET) ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಲಾಠಿಚಾರ್ಜ್ ಹಾಗೂ ರಾಮಮಂದಿರ ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಸೃಷ್ಟಿಯಾಗಿರುವ ಗೊಂದಲ ಮತ್ತು ಕಲಾಪ ಸ್ಥಗಿತವನ್ನು ಅಂತ್ಯಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊಸ ಆಫರ್ ನೀಡಿದ್ದಾರೆ.
ಪ್ರತಿಪಕ್ಷಗಳು ಲಿಖಿತ ಮನವಿ ಸಲ್ಲಿಸಿದರೆ, ತಾವು ಬುಧವಾರ ಮಧ್ಯಾಹ್ನ 3 ಗಂಟೆಯಿಂದ ಗುರುವಾರ ಮಧ್ಯಾಹ್ನ 3 ಗಂಟೆಯವರೆಗೆ ಸಂಸತ್ತಿನಲ್ಲಿದ್ದು ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧವೆಂದು ಅಮಿತ್ ಶಾ ತಿಳಿಸಿದ್ದಾರೆ.
ಆದರೆ ಗೃಹ ಸಚಿವರ ಈ ಆಫರ್ ಅನ್ನು ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ನೇರವಾಗಿ ತಿರಸ್ಕರಿಸಿದ್ದಾರೆ. “ಅಮಿತ್ ಶಾ ಅವರಿಂದ ನಮಗೆ ಯಾವುದೇ ಉಪದೇಶ ಬೇಕಿಲ್ಲ. ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಲು ಮತ್ತು ಮುಳ್ಳಿನ ಲಾಠಿಗಳಿಂದ ಹೊಡೆಯಲು ಆದೇಶ ನೀಡಿದವರು ಯಾರು ಎಂಬ ಪ್ರಶ್ನೆಗೆ ನೇರ ಉತ್ತರ ಬೇಕು. ಅಮಿತ್ ಶಾ ಅವರೇ ಈ ಆದೇಶ ನೀಡಿದ್ದರೆ ಅವರು ತಕ್ಷಣ ರಾಜೀನಾಮೆ ನೀಡಬೇಕು” ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.





Leave a comment