Home ದಾವಣಗೆರೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಹೆಚ್ಚಲು ಅಮಿತ್ ಶಾ ಅಸಮರ್ಥತೆ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ!
ದಾವಣಗೆರೆನವದೆಹಲಿಬೆಂಗಳೂರು

ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಹೆಚ್ಚಲು ಅಮಿತ್ ಶಾ ಅಸಮರ್ಥತೆ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ!

Share
Share

SUDDIKSHANA KANNADA NEWS/DAVANAGERE/DATE:19_12_2025

ಬೆಂಗಳೂರು: ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಹೆಚ್ಚಲು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಅಸಮರ್ಥತೆ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಬಿಜೆಪಿಗರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರತ್ತ ಬೊಟ್ಟು ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.

ಅಕ್ರಮ ವಲಸಿಗರು ದೇಶದ ಗಡಿಯೊಳಗೆ ಪ್ರವೇಶಿಸದಂತೆ ತಡೆಯುವುದು ಅಮಿತ್ ಶಾ ಅವರ ಹೊಣೆಯಲ್ಲವೇ? ದುರದೃಷ್ಟವಶಾತ್, ಅವರ ಕೆಲಸ ಸರ್ಕಾರಗಳನ್ನು ಬೀಳಿಸುವುದಕ್ಕಷ್ಟೇ ಸೀಮಿತವಾಗಿರುವಂತಿದೆ ಎಂದು ಕಿಡಿಕಾರಿದ್ದಾರೆ.

ದೇಶಕ್ಕಾಗಿ ತಮ್ಮ ಜೀವವನ್ನೇ ಅರ್ಪಿಸಿದ ಮಾಜಿ ಪ್ರಧಾನಿಗಳಾದ ಇಂದಿರಾಗಾಂಧಿ, ರಾಜೀವ ಗಾಂಧಿ ಅವರನ್ನು ಬಿಜೆಪಿಗರು ನಿರಂತರವಾಗಿ ದೂಷಿಸಬಹುದು. ಆದರೆ ತಮ್ಮ ಜವಾಬ್ದಾರಿ ಪ್ರದರ್ಶಿಸದ ಕೇಂದ್ರ ಗೃಹಮಂತ್ರಿಗಳನ್ನು ಪ್ರಶ್ನಿಸಿದರೆ ಬಿಜೆಪಿಯವರು ಮುಗಿಬೀಳುವುದು ಏಕೆ? ಅಮಿತ್ ಶಾ ಅವರು ಸಂವಿಧಾನಕ್ಕಿಂತ ದೊಡ್ಡವರೇ? ಎಂದು ಪ್ರಶ್ನಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles