ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡೀಪುರ ಜಿಲ್ಲೆಯಲ್ಲಿ ಶನಿವಾರ ಸೇನಾ ವಾಹನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಪರಿಣಾಮ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಮಧ್ಯಾಹ್ನ 2.30ರ ಸುಮಾರಿಗೆ ಎಸ್‌ಕೆ ಪೇಯೆನ್ ಪ್ರದೇಶದ ಬಳಿ ಕೆಟ್ಟ ಹವಾಮಾನ ಪರಿಸ್ಥಿತಿಯಿಂದ ವಾಹನವು ಚಾಲಕನ ನಿಯಂತ್ರಣ ತಪ್ಪಿ, ದುರಂತ ಸಂಭವಿಸಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಯೋಧರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಚಿಕಿತ್ಸೆ ಫಲಕಾರಿಯಾಗದೇ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಸ್ಥಿರವಾಗಿದ್ದು, ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ
ಅಪಘಾತ ಸ್ಥಳದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯನ್ನ ಮೇಲ್ವಿಚಾರಣೆಗೆ ನಿಯೋಜಿಸಲಾಗಿದೆ.