ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಲೋಕಸಭಾ ಸದಸ್ಯರಾಗಲು ಲಾಯಕ್ಕೇ?: ಅನಂತ್ ಕುಮಾರ್ ಹೆಗಡೆ ವಿರುದ್ಧ ಸಿಎಂ ಸಿದ್ದರಾಮಯ್ಯ ಸಿಡಿಮಿಡಿ

On: February 24, 2024 11:21 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:25-02-2024

ಅರಸೀಕೆರೆ: ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುವವರು ಲೋಕಸಭಾ ಸದಸ್ಯರಾಗಲು ಲಾಯಕ್ಕೇ ಎಂದು ಸಿಎಂ ಸಿದ್ದರಾಮಯ್ಯ ಅವರು ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸಿಡಿದರು.

ಅರಸೀಕೆರೆಯಲ್ಲಿ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಸಂಸದ ಅನಂತ ಕುಮಾರ್
ಹೆಗಡೆಯವರ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ ಅಷ್ಟೆ. ಯಾರಾದರೂ ವೇತನ ನೀಡಿಲ್ಲ ಎಂದು ಹೇಳಿದ್ದಾರೆಯೇ? ಅನಂತ ಕುಮಾರ ಹೆಗಡೆ ನಾವು ಅಧಿಕಾರಕ್ಕೆ ಬಂದಿರುವುದೇ ಈ ಸಂವಿಧಾನ ಬದಲಾಯಿಸಲು ಎಂದವರು. ಅಂಥವರು ಹೇಳಿಕೆ ನೀಡಿದರೆ ಯಾವ ಕಿಮ್ಮತ್ತು ಇರುತ್ತದೆ? ಎಂದರು.

ಅಮೆರಿಕದ ಅಧ್ಯಕ್ಷ ಅಬ್ರಹಾಂ ಲಿಂಕನ್ ಸಂಸತ್ತು ಮತ್ತು ನ್ಯಾಯಾಲಯಗಳಿಗೆ ಜನರೇ ಮಾಲೀಕರು. ಸಂವಿಧಾನ ಕಿತ್ತೊಗೆಯಿರಿ ಎನ್ನುವವರನ್ನೇ ಕಿತ್ತೊಗೆಯಿರಿ ಎಂದು ಹೇಳಿದ್ದರು. ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಲೋಕಸಭಾ ಸದಸ್ಯರಾಗಲು ಅರ್ಹರಲ್ಲ ಎಂದು ಕಿಡಿಕಾರಿದರು.

ಬಿಜೆಪಿಯವರು ಕೇಂದ್ರ ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆಯಲ್ಲಿ ಆಂಧ್ರಪ್ರದೇಶ, ತಮಿಳುನಾಡಿಗೆ ತೊಂದರೆ ಇಲ್ಲ. ನಮ್ಮ ಸರ್ಕಾರಕ್ಕೆ ಮಾತ್ರ ಯಾಕೆ ತೊಂದರೆ ಎಂಬುದು ಬಿಜೆಪಿ ಪ್ರಶ್ನೆ. ಹಾಗಾದರೆ ಕೇರಳದವರು ಯಾಕೆ ದೆಹಲಿಗೆ ಬಂದು ಪ್ರತಿಭಟಿಸಿದರು? ಅದಕ್ಕೆ ತಮಿಳುನಾಡಿನವರು ಏಕೆ ಬೆಂಬಲ ನೀಡಿದರು? ತೆರಿಗೆ ಹಂಚಿಕೆಯಲ್ಲಿ ಎಲ್ಲಾ ರಾಜ್ಯಗಳಿಗೂ ಅನ್ಯಾಯವಾಗಿದೆ. ದಕ್ಷಿಣ ರಾಜ್ಯಗಳಿಗೆ ಜಾಸ್ತಿ ಅನ್ಯಾಯವಾಗಿದೆ. ಉತ್ತರದ ರಾಜ್ಯಗಳಿಗೆ ಕೊಡಬೇಡಿ ಎನ್ನುವುದಿಲ್ಲ. ಆದರೆ ನಮಗೆ ಅನ್ಯಾಯ ಮಾಡಬೇಡಿ. ಕೇಂದ್ರದ ಪಾಲಿನಲ್ಲಿಯೇ ಕೊಡಲಿ. ನಮ್ಮ ಪಾಲಿನಿಂದ ಯಾಕೆ ಕಿತ್ತುಕೊಡುತ್ತಾರೆ? 100 ರೂ
ತೆರಿಗೆ ಸಂಗ್ರಹ ಮಾಡಿ ಕೊಟ್ಟರೆ 13 ರೂ. ಮಾತ್ರ ಕೊಡುತ್ತಾರೆ ಇದು ನ್ಯಾಯವೇ? ಎಂದು ಪ್ರಶ್ನಿಸಿದರು.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಆದಾಯ ಹೆಚ್ಚಿರುವ ದೇವಸ್ಥಾನಗಳಿಂದ ಕಡಿಮೆ ಆದಾಯವಿರುವ ಹಿಂದೂ ದೇವಾಲಯಗಳಿಗೆ ಬಳಸುವುದನ್ನು ವಿರೋಧಿಸುತ್ತಾರೆ. ಬೇರೆ ಯಾವ ಧರ್ಮದ ಧಾರ್ಮಿಕ ಕ್ಷೇತ್ರಗಳಿಗೂ ಇದನ್ನು ಬಳಸುವುದಿಲ್ಲ. ಅವರಿಗೆ ವಿಧಾನ ಪರಿಷತ್ತಿನಲ್ಲಿ ಬಹುಮತ ಇದೆ ಎಂದು ಮಸೂದೆ ಪಾಸಾಗದಂತೆ ಮಾಡಿದ್ದಾರೆ. ಕಳೆದ ಬಾರಿ BJP Karnataka ಸರ್ಕಾರದ ವಿರುದ್ಧ 40% ಸರ್ಕಾರ
ಎಂದು ಜಾಹೀರಾತು ನೀಡಿದ್ದಕ್ಕೆ ನನ್ನ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಂಸದರಾದ ರಾಹುಲ್ ಗಾಂಧಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯ ವಿಶೇಷ ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಜನಪ್ರತಿನಿಧಿ ನ್ಯಾಯಾಲಯ ಆದೇಶ ನೀಡಿದ್ದು, ನಾವು ನಮ್ಮ ವಕೀಲರನ್ನು ನೇಮಿಸುತ್ತೇವೆ. ಅವರು ನ್ಯಾಯಾಲಯದಲ್ಲಿ ಸೂಕ್ತ ಉತ್ತರ ನೀಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಿದರೆ ಅಥವಾ ಪ್ರತಿಭಟನಾ ಜಾಹೀರಾತು ನೀಡಿದರೆ ಅದು ಅಪರಾಧವಾಗದು ಎನ್ನುವುದು ನನ್ನ ಭಾವನೆ ಎಂದು ಹೇಳಿದರು.

ಬಿಜೆಪಿಯವರಿಗೆ ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ. ಬಾಯಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುತ್ತಾರೆ ಆದರೆ ಮುಸಲ್ಮಾನರನ್ನು ವಿರೋಧಿಸುತ್ತಾರೆ. ನನ್ನನ್ನು ಮುಸ್ಲಿಂ ಹೆಸರಿನ ಮೂಲಕ ಕರೆಯುವುದೇ ಅವರು ಅಲ್ಪಸಂಖ್ಯಾತರ ಧರ್ಮಕ್ಕೆ ವಿರುದ್ಧವಾಗಿರುವುದರಿಂದ ಎಂದು ಸಿದ್ದರಾಮಯ್ಯ ಹೇಳಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment