Site icon Kannada News-suddikshana

ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE:12-12-2024

ದಾವಣಗೆರೆ: ದಾವಣಗೆರೆ ಮತ್ತು ಹರಿಹರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 30 ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕಚೇರಿಯಲ್ಲಿ ಅರ್ಜಿಯನ್ನು ಪಡೆದು 13, ಜನವರಿ 2025 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ದಾವಣಗೆರೆ ದೂ.ಸಂ:08192-264056 ನ್ನು ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.

Exit mobile version