ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮೈಸೂರು ಜಿಲ್ಲೆಯಾದ್ಯಂತ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

On: September 30, 2024 1:58 PM
Follow Us:
---Advertisement---

(Anganwadi 2024) ಮೈಸೂರು ಜಿಲ್ಲೆಯಾದ್ಯಂತ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಉದ್ಯೋಗ ಇಲಾಖೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಯ ವಿವರ:
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ

ಹುದ್ದೆಗಳ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆ: 329
ಅಂಗನವಾಡಿ ಸಹಾಯಕಿ: 83

ಒಟ್ಟು ಹುದ್ದೆಗಳ ಸಂಖ್ಯೆ 412

ವಿದ್ಯಾರ್ಹತೆ:
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸ್ ಆಗಿರಬೇಕು.
* ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ:
* ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ತುಂಬಿರಬೇಕು.
* ಗರಿಷ್ಠ 35 ವರ್ಷ ವಯಸ್ಸು ದಾಟಿರಬಾರದು.
* ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು karnemakaone.kar.nic.in/abcd/ApplicationForm_JA_org.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಪ್ಲಿಕೇಶನ್ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು
* ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ
* ವಾಸಸ್ಥಳ ದೃಢೀಕರಣ ಪತ್ರ
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
25-09-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
19-10-2024

Join WhatsApp

Join Now

Join Telegram

Join Now

Leave a Comment