SUDDIKSHANA KANNADA NEWS/ DAVANAGERE/ DATE:27-03-2025
ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 14 ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 37 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದೆ.
ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ವೆಬ್‍ಸೈಟ್ https:/karnemakaone.kar.nic.in/abcd/ ನಲ್ಲಿ ಅರ್ಜಿ ಸಲ್ಲಿಸಬಹುದು. 2024ರ ಏಪ್ರಿಲ್ 1 ರಂತೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದುಪಡಿಸಲಾಗಿದ್ದು, ಈ ಹಿಂದೆ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಎಲ್ಲರೂ ಹೊಸದಾಗಿ ಆನ್ ಲೈನ್ ಅರ್ಜಿ ಸಲ್ಲಿಸಬೇಕೆಂದು ಜಗಳೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.