Site icon Kannada News-suddikshana

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಅನ್ನಭಾಗ್ಯ ಯೋಜನೆಯ ಹಣದ ಬದಲಿಗೆ ದಿನಸಿ ಕಿಟ್ ವಿತರಣೆ

(Annabhagya Money) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಅಕ್ಕಿಯ ಬದಲು ಇನ್ನು ಮುಂದೆ ದಿನಸಿ ಕಿಟ್ ನೀಡಲಾಗುತ್ತದೆ ಎನ್ನಲಾಗಿದೆ.

ಹೌದು, ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಈ ಹಣದ ಬದಲು ದಿನಸಿ ಕಿಟ್ ವಿತರಿಸಲು ಸರ್ಕಾರ ಮುಂದಾಗಿದೆ. ಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ದಿನಸಿ ಕಿಟ್ ಗಳನ್ನೂ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ವಿತರಿಸಲು ಆಹಾರ ಇಲಾಖೆಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಕ್ಟೋಬರ್ 1 ರಿಂದ ಈ ಯೋಜನೆ ಜಾರಿಗೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಗ್ಯಾರಂಟಿ ಭರವಸೆ ನೀಡಲಾಗಿತ್ತು. ಅಕ್ಕಿ ಲಭ್ಯವಿಲ್ಲದ ಕಾರಣ 5 ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತಿದೆ. ಈಗ ಅಕ್ಕಿ ಲಭ್ಯವಿರುವುದರಿಂದ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲು ಚಿಂತನೆ ನಡೆದಿದ್ದರೂ ಸಮೀಕ್ಷೆಯಲ್ಲಿ ಶೇಕಡ 93 ರಷ್ಟು ಪಡಿತರ ಫಲಾನುಭವಿಗಳು ಹೆಚ್ಚುವರಿ 5 ಕೆಜಿ ಅಕ್ಕಿ ಹಣದ ಬದಲು ಬೇಳೆ, ಎಣ್ಣೆ ವಿತರಿಸಲು ಬೇಡಿಕೆ ಇಟ್ಟಿದ್ದಾರೆ. ಈ ನಿಟ್ಟಿನಲ್ಲಿ ಆಹಾರ ಇಲಾಖೆ ಕ್ರಮ ಕೈಗೊಂಡು ಈ ಹಣದಲ್ಲಿ ದಿನಸಿ ಕಿಟ್ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

Exit mobile version