SUDDIKSHANA KANNADA NEWS/ DAVANAGERE/ DATE:13-07-2023
ದಾವಣಗೆರೆ: ಅಂತ್ಯೋದಯ ಅನ್ನಯೋಜನೆ (ANTYODAYA ANNA YOJANA) (AAY) ಮತ್ತು ಆದ್ಯತಾ(P.H.P.) ಪಡಿತರ ಚೀಟಿ ಹೊಂದಿರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್ಖಾತೆಗೆ ಹಣ ಪಾವತಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.
ಸರ್ಕಾರದ ಆದೇಶದನ್ವಯ ಅಧ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಯ (ANTYODAYA ANNA YOJANA) ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿ ವಿತರಿಸಲು ಉದ್ದೇಶಿಸಲಾಗಿದ್ದು, 5 ಕೆ.ಜಿ ಅಕ್ಕಿಯ ಬದಲಾಗಿ ಪಡಿತರ ಚೀಟಿ ಕುಟುಂಬದಲ್ಲಿನ ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿಗೆ ರೂ. 34 ರಂತೆ ಪ್ರತಿ ಸದಸ್ಯರಿಗೆ ರೂ.170 ರಂತೆ ಪಡಿತರ ಕುಟುಬಂದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾತ್ತಿದ್ದು, ಕಳೆದ ಮೂರು ತಿಂಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿದ್ದಾರೆ.
ಪಡಿತರ ಆಹಾರಧಾನ್ಯವನ್ನು ಪಡೆಯದೆ ಇರುವವರು ಯೋಜನೆಗೆ ಅರ್ಹರಿರುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 42,258 ಪಡಿತರ ಚೀಟಿಗಳಲ್ಲಿ ಕುಟುಂಬದ ಮುಖ್ಯಸ್ಥರು ಸಕ್ರಿಯ ಬ್ಯಾಂಕ್ಖಾತೆಯನ್ನು ಹೊಂದಿರುವುದಿಲ್ಲ, ಕೆಲವರು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡಿರುವುದಿಲ್ಲ, ಇನ್ನೂ ಕೆಲವರು ಬ್ಯಾಂಕ್ ಖಾತೆಯನ್ನು ತೆರೆದಿರುವುದಿಲ್ಲ ಹಾಗೂ ಬ್ಯಾಂಕ್ ಕೆ ವೈಸಿ ಮಾಡಿಸಿರುವುದಿಲ್ಲ. ಆದ್ದರಿಂದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿದ ನಂತರ ಹಾಗೂ ಇದುವರೆಗೂ ಕುಟುಂಬದ ಮುಖ್ಯಸ್ಥರು ಸಕ್ರಿಯ ಬ್ಯಾಂಕ್ ಖಾತೆ ಹೊಂದಿಲ್ಲದಿದ್ದರೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾತೆಯನ್ನು ತೆರೆದರೆ ಮುಂದಿನ ಮಾಹೆಯ ಯೋಜನೆಗೆ ಅರ್ಹರಾಗಿರುತ್ತಾರೆ.
ಈ ಸುದ್ದಿಯನ್ನೂ ಓದಿ:
Davanagere: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ರೇಣುಕಾಚಾರ್ಯ ಕಣ್ಣು: ಸಿದ್ದೇಶ್ವರ್ ಗೆ ಸೆಡ್ಡು ಹೊಡೆದ್ರಾ ಮಾಜಿ ಸಚಿವರು…?
ಆದ್ದರಿಂದ ಪಡಿತರ ಚೀಟಿದಾರರು ಸಮೀಪದ ಅಂಚೆ ಕಚೇರಿಗಳಲ್ಲಿ ಜುಲೈ 20 ರೊಳಗಾಗಿ ಐ.ಪಿ.ಪಿ.ಬಿ ಖಾತೆ ತೆರೆಯುವ ಮೂಲಕ ಸರಳವಾಗಿ ನಗದು ವರ್ಗಾವಣೆ ಸೌಲಭ್ಯ ಪಡೆಯಬಹುದು. ನಗದು ವರ್ಗಾವಣೆ ಸೌಲಭ್ಯ ಪ್ರಥಮ ಹಂತದ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದ ಪಡಿತರ ಚೀಟಿದಾರರಲ್ಲಿ ಬಹುತೇಕ ಬ್ಯಾಂಕ್ಖಾತೆ ವಿವರಗಳಿಗೆ ಸಂಬಂಧಿಸಿರುವುದರಿಂದ ಅಂತವರುತಮ್ಮ ಬ್ಯಾಂಕ್ಗಳಿಗೆ ಭೇಟಿ ನೀಡಿ ಶೀಘ್ರವಾಗಿ ಖಾತೆಗಳನ್ನು ಸರಿಪಡಿಸಿಕೊಳ್ಳಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿ, ತಾಲ್ಲೂಕು ಕಛೇರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
Davanagere News, Davanagere News Updates,Davanagere Suddi, Davanagere Bpl Card, Davanagere ANTYODAYA ANNA YOJANA