Site icon Kannada News-suddikshana

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ವಿಧಿವಶ

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರು ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್‌ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್‌ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ. ಈ ಮೂಲಕ ತಮ್ಮ ಕನ್ನಡ ಸೇವೆಯನ್ನು ಮುಂದುವರಿಸಿದ ಅಪರ್ಣಾ ಇನ್ನಿಲ್ಲ.

ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಶೋಕ ವ್ಯಕ್ತಪಡಿಸಿದ್ದಾರೆ

Exit mobile version