SUDDIKSHANA KANNADA NEWS/ DAVANAGERE/ DATE:24-10-2024
ಬೆಂಗಳೂರು: ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿ ಮೆರಿಟ್ ಆಧಾರದ ಮೇಲೆ ಆನ್ಲೈನ್ ಮೂಲಕ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂಬ ಮಾಹಿತಿ ಸಿಕ್ಕಿದ್ದು, ಯಾವುದೇ ಕಾರಣಕ್ಕೂ ಮೋಸ ಹೋಗಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಸಲಹೆ ನೀಡಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು ಮತ್ತು ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿ ಮೆರಿಟ್ ಆಧಾರದ ಮೇಲೆ ಆನ್ಲೈನ್ ಮೂಲಕ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ.
ಮಧ್ಯವರ್ತಿಗಳಿಂದ ಜಾಗೃತರಾಗಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ನೇಮಕಾತಿಗಾಗಿ ಗ್ರಾಮ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಮಧ್ಯವರ್ತಿಗಳು ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆ ಕೊಡಿಸುವುದಾಗಿ ಹಣ ಕೇಳುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಹಾಗಾಗಿ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಿದಲ್ಲಿ ತಾವೇ ನೇರ ಜವಾಬ್ದಾರರಾಗಿರುತ್ತೀರಿ ಎಂದು ಅವರು ತಿಳಿಸಿದ್ದಾರೆ. ಮಧ್ಯವರ್ತಿಗಳು ಹಣವನ್ನು ಕೇಳಿದಲ್ಲಿ ಅಂತಹವರ ವಿರುದ್ಧ ಪೋಲಿಸ್ ಇಲಾಖೆಯಲ್ಲಿ ಎಫ್ಐಆರ್ ದಾಖಲಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.