Site icon Kannada News-suddikshana

ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE:13-06-2024

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆವತಿಯಿಂದ ಪ್ರಸಕ್ತ ಸಾಲಿಗೆ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.sw.kar.nic.in ಗೆ ಅಥವಾ ನಾಗರಾಜ.ಕೆ, ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

Exit mobile version