SUDDIKSHANA KANNADA NEWS/ DAVANAGERE/ DATE: 07-09-2023
ದಾವಣಗೆರೆ (Davanagere): ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ 14 ಕಲ್ಯಾಣ ಸಂಘಟಿಕರ ಸಿ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಸೆ.9 ರವರೆಗೆ ವಿಸ್ತರಿಸಲಾಗಿದೆ.
ಈ ಸುದ್ದಿಯನ್ನೂ ಓದಿ:
Davanagere: ದಾವಣಗೆರೆ ಭದ್ರಾ ಅಚ್ಚುಕಟ್ಟುದಾರರಿಗೆ ಸದ್ಯಕ್ಕೆ ರಿಲೀಫ್, ಎಡದಂಡೆ ನಾಲೆ ನೀರು ಬಂದ್, ಬಲದಂಡೆ ನಾಲೆಯಲ್ಲಿ ನೀರು ಯಥಾಸ್ಥಿತಿ: ಆತಂಕಪಡಬೇಕಿಲ್ಲ ರೈತರು ಎಂದ ಮಧು ಬಂಗಾರಪ್ಪ
ಭೂ ಸೇನೆಯ ಜೆ.ಸಿ.ಓ ರ್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ್ಯಾಂಕ್‍ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬೆಂಗಳೂರು. ದೂ. 080-25589459ಗೆ ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ ಹಿರೇಮಠ್ ತಿಳಿಸಿದ್ದಾರೆ.
ಉಪನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ:
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ 6 ಉಪ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮೇಜರ್ ಲೆಫ್ಟಿನೆಂಟ್, ಕರ್ನಲ್ ಅಥವಾ ನೌಕಾ ಸೇನೆ ಮತ್ತು ವಾಯು ಸೇನೆಯಲ್ಲಿ ತತ್ಸಮಾನ ರ್ಯಾಂಕ್‍ನಿಂದ ಬಿಡುಗಡೆಯಾಗಿ, ನಿವೃತ್ತಿ ಹೊಂದಿ, 1 ಜನವರಿ 2024ಕ್ಕೆ 52 ವರ್ಷ ವಯೋಮಿತಿಯಲ್ಲಿರಬೇಕು. ಎಸ್.ಎಸ್.ಎಲ್.ಸಿ ಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆ ಹೊಂದಿರಬೇಕು.
ಅರ್ಜಿಯನ್ನು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ ವಸತಿ ಇಲಾಖೆಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆ.18ರ ಒಳಗೆ ಅದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬೆಂಗಳೂರು ದೂ. 080-25589459 ಗೆ ಸಂಪರ್ಕಿಸಬಹುದೆಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ ಹಿರೇಮಠ್ ತಿಳಿಸಿದ್ದಾರೆ.