SUDDIKSHANA KANNADA NEWS/ DAVANAGERE/ DATE:21-08-2024
ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹಿಂದಿ ಅನುವಾದಕರ ಹುದ್ದೆಗಳ ನೇಮಕಾತಿಗಾಗಿ ಮುಕ್ತ ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ.
ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ https://ssc.gov.in or www.ssckkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನ. ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದೊಳಗಿರಬೇಕು., ಪ.ಜಾತಿ, ಪ.ಪಂಗಡ ಮತ್ತು ಒ.ಬಿ.ಸಿ, ಇ.ಎಸ್.ಎಂ ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 08025502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192-259446 ಕರೆ ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.