SUDDIKSHANA KANNADA NEWS/ DAVANAGERE/ DATE:26-11-2024
ದಾವಣಗೆರೆ: ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಮಾವು, ಸಪೋಟ, ಸೀಬೆ, ನೇರಳೆ, ವಿಳ್ಯದೇಲೆ, ಅಂಗಾಂಶ ಬಾಳೆ, ಡ್ರಾಗನ್ ಫೂಟ್. ಮಲ್ಲಿಗೆ, ಗುಲಾಭಿ ಮತ್ತು ಬದುಗಳಲ್ಲಿ ತೆಂಗು ಇತ್ಯಾದಿ ಬೆಳೆಗಳನ್ನು ಬೆಳೆಯಲು ಇಚ್ಚಿಸುವ ಸಣ್ಣ ಅತೀ ಸಣ್ಣ ರೈತರು ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ರೈತರು ಪಹಣಿ, ಆಧಾರ್, ಉದ್ಯೋಗ ಚೀಟಿ, ಸಣ್ಣ ಮತ್ತು ಅತೀ ಸಣ್ಣ ರೈತರ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ, ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಸಂಬಂದಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಹೊನ್ನಾಳಿ ಅಥವಾ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ತಿಳಿಸಿದ್ದಾರೆ.