Site icon Kannada News-suddikshana

Davanagere: ಅಲ್ಪಸಂಖ್ಯಾತರ ಸಮುದಾಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE:22-08-2023

 

ದಾವಣಗೆರೆ (Davanagere): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿ.ಇಡ್ ಹಾಗೂ ಡಿ.ಇಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ: 

ಒಂದೂವರೆ ವರ್ಷದ ಪೋರನ ಟ್ಯಾಲೆಂಟ್ ಗೆ ಫಿದಾ ಗ್ಯಾರಂಟಿ: ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ

ಗ್ರಾಮೀಣ ಮತ್ತು ನಗರ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಿದ್ಯಾಭ್ಯಾಸ ಮುಂದುವರಿಸಲು ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಮಾನ್ಯತೆ ಪಡೆದಿರುವ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಇಡ್ ಹಾಗೂ ಡಿ.ಇಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.

ಅರ್ಹ, ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 21 ರೊಳಗಾಗಿ ಸೇವಾ ಸಿಂಧು Portal https://Sevasindhu.Karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಸ. ಸಂ. 8277799990, ಕಚೇರಿ ದೂ. ಸಂ. 08192 250022 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version