SUDDIKSHANA KANNADA NEWS/ DAVANAGERE/ DATE:30-08-2024
ಬಳ್ಳಾರಿ: ಪ್ರಸ್ತಕ ಶೈಕ್ಷಣಿಕ ವರ್ಷದಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಪ್ರಕಾಶ್.ಎನ್.ಎಸ್ ಅವರು ತಿಳಿಸಿದ್ದಾರೆ.
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ, ಭಾರತೀಯ ವೈದ್ಯಕೀಯ ಮಂಡಳಿ, ಯುಜಿಸಿ ಯಂತಹ ಅಧಿಕೃತ ಸಂಸ್ಥೆಗಳಿAದ ಮಾನ್ಯತೆ ಪಡೆದ ಮೊದಲ ವೃತ್ತಿಪರ ಪದವಿ ಕೋರ್ಸ್ಗಳಾದ ಬಿಇ, ಬಿ ಟೆಕ್, ಬಿಡಿಎಸ್, ಎಂಬಿಬಿಎಸ್, ಬಿ ಎಡ್, ಬಿಬಿಎ, ಬಿಸಿಎ, ಬಿ-ಫಾರ್ಮ, ಬಿಇಡಿ, ಎಲ್‌ಎಲ್‌ಬಿ ಮತ್ತು ಸ್ನಾತಕೋತ್ತರ ಪದವಿಗಳಾದ ಎಂಬಿಎ, ಎಂಸಿಎ ಕೋರ್ಸ್ಗಳಲ್ಲಿ ಶೈಕ್ಷಣಿಕ ವರ್ಷ 2024-25 ರ ಮೊದಲನೇ ವರ್ಷದಲ್ಲಿ ಪ್ರವೇಶ ಪಡೆದವರು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ಕೆಎಸ್‌ಬಿ ವೆಬ್‌ಸೈಟ್ ksb.gov.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.0836-2440176 ಗೆ ಸಂಪರ್ಕಿಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.