SUDDIKSHANA KANNADA NEWS/ DAVANAGERE/ DATE:30-08-2024
ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕಾನೂನು ಪದವಿಧರರ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಛಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವಿಧರರು ಅರ್ಹರಾಗಿದ್ದು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ.
ಸೂಚನೆ:
ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜ್ಯೆನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ಮೀರಿರಬಾರದು. ಅಭ್ಯರ್ಥಿಗಳ ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸರಬೇಕು.
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಪಾಸ್ ಮಾಡಿರುವ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆ
ಹೊಂದಿರುತ್ತಾರೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ದೂ.08392-200215, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





