SUDDIKSHANA KANNADA NEWS/ DAVANAGERE/ DATE:13-11-2024
ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್ಸೈಟ್ ನ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 8050770004 ಸಹಾಯವಾಣಿ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಾಯಿತ್ರಿ ಕೆ.ಹೆಚ್ ಇವರು ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಸ್ಎಸ್ಪಿ ಪೋರ್ಟಲ್ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:080-22261789 ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಜಗಳೂರು ದೂ.ಸಂ: 08192-277029 ನ್ನು ಸಂಪರ್ಕಿಸಬಹುದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.