SUDDIKSHANA KANNADA NEWS/ DAVANAGERE/ DATE:19-11-2024
ಶಿವಮೊಗ್ಗ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು WWW.SSP.Karnataka.gov.in ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ದಾಖಲಾತಿಗಳನ್ನು ದೃಢೀಕರಣ ಮಾಡಬೇಕಾಗಿರುವುದರಿಂದ ವಿದ್ಯಾರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಿ, ಮೂಲ ದಾಖಲಾತಿಗಳೊಂದಿಗೆ ಈ ಕಛೇರಿಗೆ ಹಾಜರಾಗಿ ಇ-ದೃಢೀಕರಣವನ್ನು ಪಡೆಯಲು ಸೂಚಿಸಿದೆ.
ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು. 2004ರವರೆಗೆ ಎಸ್.ಎಸ್.ಎಲ್.ಸಿ. ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು. 2010ರವರೆಗೆ ಪಿ.ಯು.ಸಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಹೊರ ರಾಜ್ಯಗಳಲ್ಲಿ 10ನೇ ತರಗತಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಪ್ರಸಕ್ತ ಸಾಲಿನಲ್ಲಿ ಪಿ.ಯು.ಸಿ/ಪದವಿ/ಇತರೆ ಕೋರ್ಸುಗಳನ್ನು ಕರ್ನಾಟಕದಲ್ಲಿ ವ್ಯಾಸಂಗ ಮಾಡುತಿರುವ ವಿದ್ಯಾರ್ಥಿಗಳು, ಹೊರ ರಾಜ್ಯ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ಸ್ಟಾಂಡ್ ಅಲೊನ್ ಇನ್ಸ್ಟಿಟ್ಯೂಟ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ದಾಖಲೆಗಳನ್ನು ನೀಡಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.