SUDDIKSHANA KANNADA NEWS/ DAVANAGERE/ DATE:28-08-2024
ದಾವಣಗೆರೆ: 2023 ನೇಸಾಲಿಗೆ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸುವ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಅರ್ಹರು ವೆಬ್‍ಸೈಟ್: https://sevasindhuserviceskarnataka.gov.in ನಲ್ಲಿ ಸೆಪ್ಟೆಂಬರ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08192-237480 ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.