SUDDIKSHANA KANNADA NEWS/ DAVANAGERE/ DATE:28-02-2024
ದಾವಣಗೆರೆ: ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿನ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಖಾಲಿ ಇರುವ ಅರ್ಚಕರ ಹುದ್ದೆಗೆ ಶೈವಾಗಮ ಪ್ರಸಿದ್ದ ಪರೀಕ್ಷೆಯಲ್ಲಿ ಹಾಗೂ ಪ್ರವರ ಪರೀಕ್ಷೆಯಲ್ಲಿ ತೇರ್ಗಡೆಯಾಗಿ 18 ರಿಂದ 40 ವರ್ಷ ವಯೋಮಿತಿಯುಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ತಾಲ್ಲೂಕು ಕಚೇರಿಯಿಂದ ಪಡೆದು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-272959 ದೂರವಾಣಿಗೆ ಸಂಪರ್ಕಿಸಲು ತಹಶೀಲ್ದಾರ್ ತಿಳಿಸಿದ್ದಾರೆ.
ಮಹಿಳಾ ಪ್ರಧಾನ ನಾಟಕೋತ್ಸವ:
ವೃತ್ತಿ ರಂಗಭೂಮಿ ರಂಗಾಯಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಾವಣಗೆರೆ ಕೇಂದ್ರದ ವತಿಯಿಂದ ಮಹಿಳಾ ಪ್ರಧಾನ ನಾಟಕೋತ್ಸವ ಕಾರ್ಯಕ್ರಮವನ್ನು ಫೆ 29ರವರೆಗೆ ನಗರದ ಶಿವಯೋಗಿ ಮಂದಿರದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.
ಫೆ.28 ರಂದು ಹೇಮರೆಡ್ಡಿ ಮಲ್ಲಮ್ಮ, ಫೆ.29 ರಂದು ಮಗ ಹೋದರೂ ಮಾಂಗಲ್ಯ ಬೇಕು, ಎಂಬ ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೃತ್ತಿ ರಂಗಭೂಮಿ ರಂಗಾಯಣಯದ ವಿಶೇಷಧಿಕಾರಿ ತಿಳಿಸಿದ್ದಾರೆ.