SUDDIKSHANA KANNADA NEWS/ DAVANAGERE/ DATE:07-11-2024
ಬಳ್ಳಾರಿ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರ ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು.
ಆಸಕ್ತ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು.
ಅರ್ಜಿಯನ್ನು ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡದ ಸಿಡಾಕ್ನ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು ಅಥವಾ ದೂರವಾಣಿ ಮೂಲಕ ನೋಂದಾಯಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಅಥವಾ ನೋಂದಾಯಿಸಿಕೊಳ್ಳಲು ನ.16 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡದ ಸಿಡಾಕ್ನ ಜಂಟಿ ನಿರ್ದೇಶಕರ ಕಚೇರಿ ಅಥವಾ ಮೊ.9449226221, 7483538942 ಗೆ ಸಂಪರ್ಕಿಸಬಹುದು ಎಂದು ಸಿಡಾಕ್ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.